ಬೆಂಗಳೂರು: ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನವನ್ನು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಖಂಡಿಸಿದ್ದಾರೆ. ಆಕೆಯನ್ನು ಬಿಡುಗಡೆ ಮಾಡದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ರವಾನಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರೈತರ ಪ್ರತಿಭಟನೆಗೆ ಬೆಂಬಲಿಸಿದ ದಿಶಾ ರವಿಯನ್ನು ಬಂಧಿಸಲಾಗಿದೆ. ಸರ್ಕಾರದ ವಿರುದ್ಧ ಮಾತನಾಡಿದವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ಕಾನೂನು ಬಾಹಿರವಾಗಿ ದೆಹಲಿ ಪೊಲೀಸರು ಕರ್ನಾಟಕದ ಯುವತಿಯನ್ನು ಬಂಧಿಸಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ತಕ್ಷಣ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ.. ಟೂಲ್ಕಿಟ್ ಪ್ರಕರಣ: ಇಂದು ನಿಕಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
ಮುಂಬೈನಲ್ಲಿ ಕೆಲ ಹೋರಾಟಗಾರರನ್ನು ಸಹ ಬಂಧಿಸಲಾಗಿದೆ. ಸರ್ವಾಧಿಕಾರಿಯಂತೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.