ಬೆಂಗಳೂರು: ಉದ್ಯಮಿಗಳಾಗಬೇಕೆಂದು ಬಯಸುವವರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯಲ್ಲಿ ಇಂಡಿಯನ್ ಮನಿ ಡಾಟ್ ಕಾಂನ ಫೈನಾನ್ಸಿಯಲ್ ಫ್ರೀಡಂ ಆ್ಯಪ್ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿರುವ ಕೋರ್ಸ್ಗಳನ್ನು ಎಫ್ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಇಂಡಿಯನ್ ಮನಿ ಡಾಟ್ ಕಾಂನ ಸಿಇಒಸಿಎಸ್ ಸುಧೀರ್, ಫೈನಾನ್ಸಿಯಲ್ ಫ್ರೀಡಂ ಆ್ಯಪ್ನಲ್ಲಿರುವ ಬಿಸಿನೆಸ್ ಕಟ್ಟುವುದು ಹೇಗೆ? ಎನ್ನುವ ಕೋರ್ಸ್ ಪರಿಚಯಿಸಲಾಗಿದೆ. ಸ್ವಂತ ಉದ್ದಿಮೆ ಆರಂಭಿಸಬೇಕು ಎಂಬುವವರಿಗೆ ಈ ಕೋರ್ಸ್ ಉಪಯುಕ್ತವಾಗಲಿದೆ.ಈ ಕೋರ್ಸ್ ಮೂಲಕ ಕಟ್ಟಿರುವ ಉದ್ದಿಮೆಯನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸಬೇಕು. ಬೆಳೆಸಿರುವ ಉದ್ಯಮವನ್ನು ವಿಸ್ತರಿಸಬೇಕು ಎಂದು ಕೊಂಡಿರುವವರಿಗೆ ಅನುಕೂಲವಾಗಲಿದೆ. ಹೆಚ್ಚು ಜನರಿಗೆ ಈ ವಿಚಾರ ತಲುಪಬೇಕು ಎನ್ನುವ ಉದ್ದೇಶದಿಂದ ಕನ್ನಡದಲ್ಲೇ ಈ ಕೋರ್ಸ್ ವಿನ್ಯಾಸಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ಮತ್ತಷ್ಟು ಕೋರ್ಸ್ಗಳನ್ನು ರೂಪಿಸಲಾಗುತ್ತದೆ ಎಂದು ವಿವರಿಸಿದರು.