ಬೆಂಗಳೂರು: ರಾಜಧಾನಿಯಲ್ಲಿ ಮೊತ್ತೊಂದು ಭಾರಿ ಅವಘಡ ಸಂಭವಿಸಿದೆ. ಬೆಳ್ಳಂ ಬೆಳಗ್ಗೆ ಬೆಂಕಿ ಬಿದ್ದು ಮಾಲ್ ಹೊತ್ತಿ ಉರಿದಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ದುರಂತ ತಪ್ಪಿಸಿದೆ.
ಅರಕೆರೆ ಗೇಟ್ ಬಳಿಯಲ್ಲಿರುವ ಸೌಥ್ ಇಂಡಿಯನ್ ಮಾಲ್ನಲ್ಲಿ ಇಂದು ನುಸಕಿನ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಮಾಲ್ಗೆ ಆವರಿಸಿ ಹೊತ್ತಿ ಉರಿದಿದೆ. ನಮ್ಮ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ನಂದಿಸಿದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸೋ ಕಾರ್ಯ ನಡೆಯಿತು. ಗ್ರೌಂಡ್ ಫ್ಲೋರ್ನ ಸೂಪರ್ ಮಾರ್ಕೆಟ್ನಲ್ಲಿ ಬೆಂಕಿ ಮೊದಲು ಕಾಣಿಸಿಕೊಂಡಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ . ಘಟನೆಗೆ ಕಾರಣ ತಿಳಿದು ಬಂದಿಲ್ಲ ಎಂದು ಮಾಹಿತಿ ನೀಡಿದೆ.
(ಇದನ್ನೂ ಓದಿ: ಮಹಿಳೆಗೆ ಲೈಂಗಿಕ ಕಿರುಕುಳ.. ಗಂಡನ ಆವಾಜ್‌ಗೆ ಹೆದರಿ ಯುವಕ ಆತ್ಮಹತ್ಯೆ!)