ಬೆಂಗಳೂರು: ಮೆಜೆಸ್ಟಿಕ್‌ನ ತುಳಸಿತೋಟದ ಬಳಿಯ ಕೆಂಪೇಗೌಡ ಮೆಟ್ರೋ ನಿಲ್ದಾಣದ ಪಕ್ಕದಲ್ಲಿ ಬೆಂಕಿ ಹತ್ತಿಕೊಂಡು ಸುತ್ತಲಿನ ಸ್ಥಳ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಕೆಂಪೇಗೌಡ ಮೆಟ್ರೋ ನಿಲ್ದಾಣದ ಪಕ್ಕದಲ್ಲಿ ಒಣಗಿದ ಗಿಡಮರಗಳು ಹಾಗೂ ಕಸದ ರಾಶಿಗೆ ಇದ್ದಕ್ಕಿದ್ದ ಹಾಗೆ ಬೆಂಕಿ ಬಿದ್ದಿದೆ. ತಕ್ಷಣವೇ ಮೆಟ್ರೊ ಸಿಬ್ಬಂದಿ, ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಘಟನೆಯಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.