ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗಳು ಸುಟ್ಟು ಕರಕಲಾಗಿವೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ 2 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.
ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ವೈಟ್ ಫೀಲ್ಡ್ನಲ್ಲಿನ ಗ್ಯಾರೇಜ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಹಾಸಿಗೆ ಅಂಗಡಿಗೆ ಸಹ ತಗುಲಿದೆ. ಅಗ್ನಿ ಅವಘಡದಿಂದಾಗಿ ಗ್ಯಾರೇಜ್ನಲ್ಲಿದ್ದ 20ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಹಾಸಿಗೆಗಳು ಸುಟ್ಟು ಕರಕಲಾಗಿವೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಣಿವೆಗೆ ಬಿದ್ದ ಬಸ್; ಶಾಲಾ ಮಕ್ಕಳು ಸೇರಿ 16 ಜನ ಸಾವು