ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಬೆಂಕಿ ಹಾಕಿದ ಆರೋಪ ಎದುರಿಸುತ್ತಿರುವ ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ಸಲ್ಲಿಸಿದ್ದು, ವಾದ ಮಂಡಿಸಲು ಹೈಕೋರ್ಟ್ ಕಾಲಾವಕಾಶ ನೀಡಿದೆ.
ಇದನ್ನೂ ಓದಿ...ಸರ್ಕಾರಕ್ಕೆ ಹಾಗೂ ನೆಹರು ಓಲೇಕಾರ್ಗೆ ಹೈಕೋರ್ಟ್ ನೋಟಿಸ್!
ಜಾಮೀನು ಅರ್ಜಿ ಪರ ವಾದ ಮಂಡಿಸಲು ಕಾಲಾವಕಾಶಕ್ಕೆ ಸಂಪತ್ ರಾಜ್ ಪರ ವಕೀಲರು ಮನವಿ ಮಾಡಿದ್ದರು. ಹೈಕೋರ್ಟ್ ಮನವಿಯನ್ನು ಪುರಸ್ಕರಿಸಿ ಮುಂದಿನ ವಾರಕ್ಕೆ ವಿಚಾರಣೆ ಮುಂದೂಡಿದೆ. ಈಗಾಗಲೇ NIA ಪರ ವಕೀಲರು ಸಂಪತ್ ರಾಜ್ ಜಾಮೀನು ಅರ್ಜಿಗೆ ಆಕ್ಷೇಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.