ಬೆಂಗಳೂರು: ಪೀಠೋಪಕರಣಗಳಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಫರ್ನಿಚರ್ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಬೆಂಗಳೂರು ಕೆಂಗೇರಿ ಕೆ.ಹೆಚ್.ಬಿ. ಬಡಾವಣೆಯಲ್ಲಿರುವ ಫರ್ನಿಚರ್ ಗೋದಾಮಿನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎರಡು ಅಗ್ನಿಶಾಮಕ ವಾಹನದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆಯನ್ನು ಅಗ್ನಿಶಾಮಕ ದಳ ಅಧಿಕಾರಿಗಳು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ಪೀಠೋಪಕರಣಗಳಿಗೆ ಹಾನಿಯಾಗಿದ್ದು ಬಿಟ್ಟರೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.