ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವಿವಿಧ ಇಲಾಖೆಯಲ್ಲಿನ ಉಳಿದ ಮೂಲ ವೃಂದದ 1,010 ಸಹಾಯಕರು, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಪತಿಗೆ ಪರಸ್ತ್ರೀಯರೊಂದಿಗೆ ಅಕ್ರಮ ಸಂಬಂಧ ಆರೋಪ: ಡೆತ್ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ
2019-20ರಲ್ಲಿ ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆಕ್ಷೇಪಣೆಗಳಿದ್ದಲ್ಲಿ ಪಟ್ಟಿ ಪ್ರಕಟವಾದ 7 ದಿನಗಳ ಒಳಗಾಗಿ ಸಲ್ಲಿಸುವಂತೆ ಕೆಪಿಎಸ್‌ಸಿ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ ಬೆಂಗಳೂರು-560001 ಸಂಪರ್ಕಿಸಬಹುದು ಮತ್ತು ವಿವರಗಳನ್ನು kpsc.kar.nic.in ನೋಡಬಹುದು ಎಂದು ಕೆಪಿಎಸ್‌ಸಿ ತಿಳಿಸಿದೆ.