ETV Bharat / city

ಕೊರೊನಾಗೆ ಬೆಂಗಳೂರಿನಲ್ಲಿ ಸಂಚಾರಿ ಎಎಸ್​ಐ ಬಲಿ..! - Bengaluru corona latest news

ಸಿಲಿಕಾನ್​ ಸಿಟಿಯಲ್ಲಿ ಮಹಾಮಾರಿ ಕೊರೊನಾಕ್ಕೆ ಪೊಲೀಸ್​ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ​ ಸಿಬ್ಬಂದಿಯಲ್ಲಿ ಆತಂಕ ಮನೆಮಾಡಿದೆ.

police officer died
ಕೊರೊನಾಗೆ ಬಲಿ
author img

By

Published : Jun 16, 2020, 12:20 PM IST

Updated : Jun 16, 2020, 12:55 PM IST

ಬೆಂಗಳೂರು: ನಗರದ ವಿ.ವಿ. ಪುರಂ ವಾರ್ಡ್​​​ನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಎಸ್​​ಐ ಆಗಿ ಕಾರ್ಯನಿರ್ವಹಿಸುತ್ತಿದ್ದ 59 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಕೊರೊನಾಗೆ ಬಲಿಯಾದ ಮೊದಲ ಪೊಲೀಸ್​ ಅಧಿಕಾರಿಯಾಗಿದ್ದಾರೆ.

ಕೊರೊನಾಗೆ ಬಲಿ

ನಗರದ ಸುಂಕದಕಟ್ಟೆಯಲ್ಲಿ ವಾಸಿಸುತ್ತಿದ್ದ ಇವರು ಜೂನ್​ 13ನೇ ತಾರೀಕಿನಿಂದ ಕೆಲಸಕ್ಕೆ ರಜೆ ಹಾಕಿದ್ದು, ಮನೆಯಲ್ಲೇ ಕುಸಿದು ಬಿದ್ದಿದ್ದರು. ಕೆ.ಸಿ. ಜನರಲ್ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಿಸಿದಾಗ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು.

ಏಪ್ರಿಲ್, ಮೇ ತಿಂಗಳಲ್ಲಿ ರಜೆಯಲ್ಲಿದ್ದ ಇವರು, ಜೂನ್ 1 ರಿಂದ ಕೆಲಸ ಆರಂಭಿಸಿದ್ದರು. ಕೇವಲ ಎದೆ ನೋವು ಬಂದು, ಆಸ್ಪತ್ರೆಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ಡಾ. ಬಾಲಸುಂದರ್ ತಿಳಿಸಿದ್ದಾರೆ.

ಮನೆಯ 13 ಜನರನ್ನು ಪ್ರಾಥಮಿಕ ಸಂಪರ್ಕಿತರೆಂದು ಹೋಟೆಲ್​ಗೆ ಶಿಫ್ಟ್ ಮಾಡಲಾಗಿದೆ. ಏಳು ಮಂದಿ ದ್ವಿತೀಯ ಸಂಪರ್ಕಿತರಿದ್ದು, ವಿ.ವಿ. ಪುರಂ ಸಂಚಾರಿ ಪೊಲೀಸ್ ಠಾಣೆಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ, ಸೀಲ್ ಡೌನ್ ಮಾಡಲಾಗಿದೆ ಎಂದು ಬಿಬಿಎಂಪಿ ದಕ್ಷಿಣ ವಿಭಾಗದ ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.

Last Updated : Jun 16, 2020, 12:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.