ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ನೀರಿನ ಹಂಚಿಕೆ ವಿಚಾರದಲ್ಲಿ ಸಮನ್ವಯತೆ ಕಾಯ್ದುಕೊಳ್ಳುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಮಹಾರಾಷ್ಟ್ರ ಸರ್ಕಾರದ ನೀರಾವರಿ ಸಚಿವ ಜಯಂತ ಪಾಟೀಲ್ ಭೇಟಿ ನೀಡಿದರು. ಉಭಯ ರಾಜ್ಯಗಳ ನಡುವಿನ ಜಲ ವಿಷಯಗಳ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಜತೆ ಸಮಾಲೋಚನೆ ನಡೆಸಿದರು.
![CM Basavaraj Bommai](https://etvbharatimages.akamaized.net/etvbharat/prod-images/12695027_thumjpg.jpg)
ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ನ್ಯಾಯಾಧಿಕರಣ ಹೊರಡಿಸಿರುವ ಅಧಿಸೂಚನೆ ಕುರಿತು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ ಪಾಟೀಲ್ ಜತೆ ಚರ್ಚಿಸಿದ್ದು, ದೆಹಲಿಯಲ್ಲಿ ಮತ್ತೊಮ್ಮೆ ಸಭೆ ನಡೆಸುವ ನಿರ್ಧಾರ ಮಾಡಿದ್ದೇವೆ ಎಂದರು.
![CM Basavaraj Bommai](https://etvbharatimages.akamaized.net/etvbharat/prod-images/kn-bng-08-cm-maharashtra-minister-meet-script-7208080_06082021182921_0608f_1628254761_753.jpg)
ದೂದ್ ಗಂಗಾ ಯೋಜನೆ ಕುರಿತು ಸಮಾಲೋಚನೆ ನಡೆಸಲಾಯಿತು. ಗಡಿ ಜಿಲ್ಲೆಯಲ್ಲಿ ನೆರೆ ನಿರ್ವಹಣೆ ಕುರಿತು ಚರ್ಚಿಸಿದ್ದೇವೆ. ನೆರೆ ನಿರ್ವಹಣೆ ವಿಷಯದಲ್ಲಿ ಉಭಯ ರಾಜ್ಯಗಳ ನಡುವೆ ಸಮನ್ವಯತೆ ಚೆನ್ನಾಗಿದೆ. ಉಭಯ ರಾಜ್ಯಗಳ ನಡುವಿನ ನೀರಿನ ಹಂಚಿಕೆ ವಿಚಾರದಲ್ಲಿ ಸಮನ್ವಯತೆಯೆಡೆ ನಮ್ಮ ಮೊದಲ ಆದ್ಯತೆ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ನನಗಿಷ್ಟವಾದ ಖಾತೆ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇನೆ: ಸಚಿವ ಆನಂದ್ ಸಿಂಗ್