ಬೆಂಗಳೂರು : ಸಿಲಿಕಾನ್ ಸಿಟಿಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಬಹುತೇಕ ಎಲ್ಲ ಬಡಾವಣೆಗಳಲ್ಲಿ ಮಳೆಯಾಗಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದ ರಾಜ್ಯದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಬಿಸಿಲ ಬೇಗೆಯಿಂದ ಬೇಸತ್ತಿದ್ದ ಜನರು ಹಾಗೂ ರೈತರು ನಿಟ್ಟುಸಿರು ಬಿಡುತ್ತಿದ್ದಾರೆ. ಸಂಜೆಯ ವೇಳೆಯಲ್ಲಿ ರಾಜಧಾನಿಯ ಮಲ್ಲೇಶ್ವರ, ಸದಾಶಿವನಗರ, ಚಾಮರಾಜಪೇಟೆಯಲ್ಲಿ ಮೊದಲ ಮಳೆಯ ಸಿಂಚನವಾಗಿದೆ.
ನಗರದ ಹೊರವಲಯಲ್ಲೂ ಮಳೆ : ಗಿರಿನಗರ, ಹನುಮಂತನಗರ, ಬನಶಂಕರಿ, ಬಸವನಗುಡಿ, ಜಯನಗರ, ಜೆಪಿನಗರ, ಕುರುಬರಹಳ್ಳಿ, ಪದ್ಮನಾಭನಗರ, ಚಿಕ್ಕಪೇಟೆ, ಕಾಟನ್‌ಪೇಟೆ ಸೇರಿದಂತೆ ನಗರದ ಹೊರ ಭಾಗದಲ್ಲೂ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಮುಸ್ಲಿಮರ ಸಹಕಾರದೊಂದಿಗೆ ಕೋಲಾರದ ಕ್ಲಾಕ್ ಟವರ್ ಮೇಲೆ ಹಾರಾಡಿದ ತ್ರಿವರ್ಣ ಧ್ವಜ..