ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಮೃತಪಟ್ಟಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು ಕೊರೊನಾಗೆ ಬಲಿಯಾಗಿದ್ದಾರೆ. ಸೆಂಟ್ ಮಾರ್ಥಾಸ್ ಆಸ್ಪತ್ರೆಯಿಂದ ರವಾನೆ ಆಗಿದ್ದ 61 ವರ್ಷದ ಪುರುಷ ಹಾಗೂ 57 ವರ್ಷದ ಪುರುಷ ಕೊರೊನಾದಿಂದ ಮೃತಪಟ್ಟಿದ್ದು, ಇವರನ್ನ ರಾಜೀವ್ ಗಾಂಧಿ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. 58 ವರ್ಷದ ವ್ಯಕ್ತಿಯನ್ನು ಜೂನ್ 5ರಂದು ಖಾಸಗಿ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ರವಾನಿಸಲಾಗಿತ್ತು. ಕಿಮ್ಸ್ನಿಂದ ಜೂನ್ 12ರಂದು ರವಾಸಲಾಗಿದ್ದ 58 ವರ್ಷದ ಮಹಿಳೆ ಕೂಡಾ ಕೊರೊನಾಗೆ ಬಲಿಯಾಗಿದ್ದಾರೆ.
50 ವರ್ಷದ ಮತ್ತೊಬ್ಬ ವ್ಯಕ್ತಿಯೂ ಕೊರೊನಾಗೆ ಬಲಿಯಾಗಿದ್ದು, ಜೂನ್ 12ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆಯೊಂದಿಗೆ ಸೋಂಕಿಗೆ ಬಲಿಯಾದವರ ಸಂಖ್ಯೆಯೂ ಏರಿಕೆ ಆಗ್ತಿದೆ. ಬೆಂಗಳೂರು ಒಂದರಲ್ಲೇ 32 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 84ಕ್ಕೆ ಏರಿಕೆ ಆಗಿದೆ.