ಬೆಂಗಳೂರು: ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯ ಐವರು ಸಿಬ್ಬಂದಿಗೆ ಇಂದು ಕೊರೊನಾ ವಕ್ಕರಿಸಿದೆ.
ಕೊರೊನಾ ನಿಯಂತ್ರಿತ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದ ಸಂಚಾರಿ ಪೊಲೀಸರ ಪೈಕಿ ಎಎಸ್ಐ, ಇಬ್ಬರು ಹೆಡ್ ಕಾನ್ಸ್ಟೇಬಲ್, ಇಬ್ಬರು ಕಾನ್ಸ್ಟೇಬಲ್ಗೆ ಸೋಂಕು ದೃಢವಾಗಿದೆ.
ಠಾಣೆಯನ್ನು ಸ್ಯಾನಿಟೈಸ್ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಇಲಾಖೆಯಲ್ಲಿ ಈವರೆಗೂ 97 ಪೊಲೀಸರಿಗೆ ಸೋಂಕು ತಗುಲಿದ್ದು, ಮೂವರು ಸಾವನ್ನಪ್ಪಿದ್ದಾರೆ. 35ಕ್ಕೂ ಹೆಚ್ಚು ಪೊಲೀಸರು ಗುಣಮುಖರಾಗಿದ್ದಾರೆ.
ನಗರದಲ್ಲಿನ 115 ಪೊಲೀಸ್ ಠಾಣೆಗಳ ಪೈಕಿ 15 ಠಾಣೆಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಸಿಟಿ ಮಾರ್ಕೆಟ್, ಕಲಾಸಿಪಾಳ್ಯ, ವಿವಿ ಪುರಂ ಪೊಲೀಸ್ ಠಾಣೆಗಳು ಕೊರೊನಾ ಹಾಟ್ಸ್ಪಾಟ್ಗಳಾಗಿವೆ.