ಬೆಂಗಳೂರು: ಹೈಕೋರ್ಟ್ ಆದೇಶ ಮೇರೆಗೆ ಮಸೀದಿಗಳಲ್ಲಿರುವ ಧ್ವನಿವರ್ಧಕ ತೆರವುಗೊಳಿಸಲು ನಗರ ಪೊಲೀಸರು ಮುಂದಾಗಿದ್ದು, ಈಗಾಗಲೇ ಸಿದ್ದಾಪುರ ಬಳಿಯಿರುವ ಧ್ವನಿವರ್ಧಕ ತೆರವುಗೊಳಿಸಿದ್ದಾರೆ.
ಮಸೀದಿಗಳಲ್ಲಿ ಪ್ರತಿದಿನ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಧ್ವನಿವರ್ಧಕ ಹಾಕಿರುವುದರಿಂದ ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂದು ಇತ್ತೀಚೆಗೆ ವ್ಯಕ್ತಿಯೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ವಿಶೇಷ ದಿನ ಹೊರತುಪಡಿಸಿ ಸಾಮಾನ್ಯ ದಿನಗಳಲ್ಲಿ ಧ್ವನಿವರ್ಧಕ ಬಳಸಬಾರದು ಎಂದು ಆದೇಶಿಸಿತ್ತು.
ಕೋರ್ಟ್ ಆದೇಶದ ಪ್ರಕಾರ ಪೊಲೀಸರು ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕ ತೆರಲುಗೊಳಿಸಲು ಮುಂದಾಗಿದ್ದು, ಸಿದ್ದಾಪುರ ವಾರ್ಡ್‌ನಲ್ಲಿ ಮಸೀದಿಯ ಧ್ವನಿವರ್ಧಕವನ್ನು ಈಗಾಗಲೇ ತೆರವು ಮಾಡಿದ್ದಾರೆ. ಇದರ ಬೆನ್ನಲೇ ಸಂಪಿಗೆಹಳ್ಳಿ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಬರುವ ಧ್ವನಿವರ್ಧಕ ತೆರವುಗೊಳಿಸುವಂತೆ ಮಸೀದಿ ಆಡಳಿತ ಮಂಡಳಿಗೆ ನೊಟೀಸ್ ಜಾರಿ ಮಾಡಿದ್ದಾರೆ.
ಇದನ್ನೂ ಓದಿ: ಅಯೋಗ್ಯರನ್ನು ವರಿಷ್ಠರು ಸಿಎಂ ಮಾಡುವುದಿಲ್ಲ : ಮುಖ್ಯಮಂತ್ರಿ ಪಟ್ಟದ ಕನಸು ಕಾಣ್ತಿರುವ ನಾಯಕರಿಗೆ ಯತ್ನಾಳ್ ಟಾಂಗ್