ETV Bharat / city

ರಾಜ್ಯದಲ್ಲೇ ಮೊದಲು : ಪರಪ್ಪನ ಅಗ್ರಹಾರದಲ್ಲಿ ITI ಕಾಲೇಜು? - ITI college start at Parappana Agrahara Central Prison

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸರ್ಕಾರದ ಮಾನ್ಯತೆ ಯಲ್ಲಿಯೇ ಐಟಿಐ ಕಾಲೇಜು ಸ್ಥಾಪಿಸಲು ನಿರ್ಧರಿಸಿದ್ದು, ಖೈದಿಗಳ ಕೈಗೆ ಕಾಯಕದ ಸ್ಪರ್ಶ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಜೈಲಿನ ಮೂಲಗಳಿಂದ ತಿಳಿದು ಬಂದಿದೆ.

Parappana Agrahara Central Prison
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ
author img

By

Published : May 28, 2022, 3:03 PM IST

ಬೆಂಗಳೂರು: ಮಂಗಳೂರಿನಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ಐಟಿಐ ಕಾಲೇಜು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಲಾಗಿದೆ. ಇದೇ ಕಾಲೇಜನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸ್ಥಳಾಂತರಿಸುವ ಚಿಂತನೆ ಗೃಹ ಇಲಾಖೆ ಮುಂದಿತ್ತು. ಹೀಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದೇ ಮೊದಲ ಬಾರಿಗೆ ವೃತ್ತಿಪರ ಕಾಲೇಜು ಖೈದಿಗಳ ಭವಿಷ್ಯಕ್ಕಾಗಿ ದಾರಿ ತೋರಿಸಿದಂತಾಗಿದೆ.

ಸರ್ಕಾರದ ಮಾನ್ಯತೆ ಅಡಿ ಐಟಿಐ ಕಾಲೇಜು ಸ್ಥಾಪಿಸಲು ನಿರ್ಧರಿಸಿದ್ದು, ಖೈದಿಗಳ ಕೈಗೆ ಕಾಯಕದ ಸ್ಪರ್ಶ ನೀಡಲಿದೆ. ಮೊದಲ ಹಂತವಾಗಿ 6 ತಿಂಗಳ ಅಲ್ಪಾವಧಿ ಕೋರ್ಸ್‌, ಎರಡು ವರ್ಷಗಳ ವೃತ್ತಿ ಶಿಕ್ಷಣ ಸಂಬಂಧಿ ಕೋರ್ಸ್‌ಗಳನ್ನು (ಐಟಿಐ, ಎಲೆಕ್ಟ್ರಾನಿಕ್ಸ್‌) ಆರಂಭಿಸಲಾಗುತ್ತದೆ. ಕನಿಷ್ಠ 8ನೇ ತರಗತಿ ಪಾಸಾಗಿರಬೇಕು ಎಂಬ ಮಾನದಂಡ ನಿಗದಿಪಡಿಸಲಾಗಿದೆ.

ಈ ಪ್ರಸ್ತಾವನೆಗೆ ಕಾರಾಗೃಹ ಇಲಾಖೆ ಅನುಮತಿ ನೀಡಿದೆ. ರಾಜ್ಯ ಕಾರಾಗೃಹ ಇಲಾಖೆ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದು,ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಹೀಗಾಗಿ ಕೆಲವೇ ತಿಂಗಳಲ್ಲಿ ಜೈಲು ಹಕ್ಕಿಗಳಿಗೂ ಐಟಿಐ ಭಾಗ್ಯ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕ್ರೀಡೆಗಳ ಕಲರವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.