ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನೀಡಿರುವ ಮೀಸಲಾತಿ ಕುರಿತು ಪರಾಮರ್ಶಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.
ಇದನ್ನೂ ಓದಿ...ಬಂಧಿಸಲು ಹೋದ ಪೊಲೀಸರ ಮೇಲೆಯೇ ಆರೋಪಿಗಳ ಸಹಚರರಿಂದ ಹಲ್ಲೆ! ವಿಡಿಯೋ
ನವೆಂಬರ್ 18ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ಸಮಿತಿ ರಚಿಸಲಾಗಿದ್ದು, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅದಕ್ಕೆ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಸದಸ್ಯರಾಗಿ ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಹಾಗೂ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಆಯ್ಕೆಯಾಗಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ, ಸಚಿವ ಸಂಪುಟ ಉಪ ಸಮಿತಿಗೆ ಅಗತ್ಯ ನೆರವನ್ನು ನೀಡಲಿದೆ. ಸಂಪುಟ ಉಪ ಸಮಿತಿ ವರದಿ ಸಿದ್ಧಪಡಿಸಿ ನೀಡುವ ಜವಾಬ್ದಾರಿ ಹೊತ್ತಿದೆ.