ETV Bharat / city

ಯೋಧರ ಬಲಿದಾನದ ಬಳಿಕ ಚೀನಾ ಉತ್ಪನ್ನ ಬಹಿಷ್ಕರಿಸುವ ಬಗ್ಗೆ ಜ್ಞಾನೋದಯವಾಗಿದೆ: ಹೆಚ್​ಡಿಕೆ ಟ್ವೀಟ್​​ - ಚೀನಾ ಉತ್ಪನ್ನ ನಿಷೇಧಿಸುವ ಸುದ್ದಿ

ಚೀನಾ ಉತ್ಪನ್ನ ಬಹಿಷ್ಕರಿಸಿ ಎಂಬುದು ದೇಶದ ಆಶೋತ್ತರಗಳಲ್ಲಿ ಒಂದು. ಈ ಕೂಗು ಇತ್ತೀಚೆಗೆ ಹೆಚ್ಚು ಬಲಗೊಳ್ಳುತ್ತಿದೆ. ದೇಶದ ಮಾರುಕಟ್ಟೆ ಆಕ್ರಮಿಸಿಕೊಂಡಿರುವ ಚೀನಾ ಉತ್ಪನ್ನಗಳಿಗೆ ನಮ್ಮ ಉತ್ಪನ್ನಗಳ ಮೂಲಕ ಸೆಡ್ಡು ಹೊಡೆಯಬೇಕೆಂಬ ಪರಿಕಲ್ಪನೆಯಡಿ 2018ರಲ್ಲಿ ‘ಕಾಂಪಿಟ್​ ವಿತ್​ ಚೀನಾ’ ಎಂಬ ಯೋಜನೆಯನ್ನ ನಾನು ಸಿಎಂ ಆದಾಗ ರೂಪಿಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

former chief minister h.d.kumaraswamy tweet about China-India conflict on the border
ಅಮಾಯಕರ ಬಲಿದಾನವಾದ ಬಳಿಕ ಕೆಲವರಿಗೆ ಚೀನಾ ಉತ್ಪನ್ನ ಬಹಿಷ್ಕರಿಸುವ ಜ್ಞಾನೋದಯವಾಗಿದೆ..ಹೆಚ್​ಡಿಕೆ ಟ್ವೀಟ್​​
author img

By

Published : Jun 19, 2020, 4:00 PM IST

ಬೆಂಗಳೂರು: ಗಡಿಯಲ್ಲಿ ಅಮಾಯಕರ ಬಲಿದಾನದ ನಂತರ ಕೆಲವರಿಗೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಬಗ್ಗೆ ಜ್ಞಾನೋದಯವಾಗಿದೆ. ಆದರೆ, ನನ್ನ ಅಧಿಕಾರಾವಧಿಯಲ್ಲಿ ಈ ಬಗ್ಗೆ ಗಂಭೀರವಾಗಿ ಯೋಚಿಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಚೀನಾ ವಸ್ತುಗಳನ್ನು ಬಹಿಷ್ಕರಿಸುವುದು ಘೋಷವಾಕ್ಯದಷ್ಟು ಸುಲಭವಲ್ಲ. ಅದಕ್ಕೆ ರಚನಾತ್ಮಕ ಯೋಜನೆಗಳು ಬೇಕು. ಮೈತ್ರಿ ಸರ್ಕಾರದ ಯೋಜನೆಗಳು ಅದಕ್ಕೆ ಮಾದರಿ ಎಂದು ಅವರು ಟ್ವೀಟ್​ ಮಾಡಿದ್ದಾರೆ.

former chief minister h.d.kumaraswamy tweet about China-India conflict on the border
ಅಮಾಯಕರ ಬಲಿದಾನವಾದ ಬಳಿಕ ಕೆಲವರಿಗೆ ಚೀನಾ ಉತ್ಪನ್ನ ಬಹಿಷ್ಕರಿಸುವ ಜ್ಞಾನೋದಯವಾಗಿದೆ..ಹೆಚ್​ಡಿಕೆ ಟ್ವೀಟ್​​

ಈ ಕುರಿತು ಟ್ವೀಟ್ ಮಾಡಿರುವ ಹೆಚ್​ಡಿಕೆ, 'ಚೀನಾ ಉತ್ಪನ್ನ ಬಹಿಷ್ಕರಿಸಿ ಎಂಬುದು ದೇಶದ ಆಶೋತ್ತರಗಳಲ್ಲಿ ಒಂದು. ಈ ಕೂಗು ಇತ್ತೀಚೆಗೆ ಹೆಚ್ಚು ಬಲಗೊಳ್ಳುತ್ತಿದೆ. ದೇಶದ ಮಾರುಕಟ್ಟೆ ಆಕ್ರಮಿಸಿಕೊಂಡಿರುವ ಚೀನಾ ಉತ್ಪನ್ನಗಳಿಗೆ ನಮ್ಮ ಉತ್ಪನ್ನಗಳ ಮೂಲಕ ಸೆಡ್ಡು ಹೊಡೆಯಬೇಕೆಂಬ ಪರಿಕಲ್ಪನೆಯಡಿ 2018ರಲ್ಲಿ ‘ಕಾಂಪಿಟ್​ ವಿತ್​ ಚೀನಾ’ ಎಂಬ ಯೋಜನೆಯನ್ನ ನಾನು ಸಿಎಂ ಆದಾಗ ರೂಪಿಸಲಾಗಿತ್ತು.

ಅಮಾಯಕರ ಬಲಿದಾನವಾದ ಬಳಿಕ ಕೆಲವರಿಗೆ ಚೀನಾ ಉತ್ಪನ್ನ ಬಹಿಷ್ಕರಿಸುವ ಜ್ಞಾನೋದಯವಾಗಿದೆ... ಹೆಚ್​ಡಿಕೆ ಟ್ವೀಟ್​​

‘ಕಾಂಪಿಟ್​ ವಿತ್​ ಚೀನಾ’ ಯೋಜನೆ ಜಾರಿಗೆ ತರಲು ನನ್ನ ನೇತೃತ್ವದ ಮೈತ್ರಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಇದಕ್ಕಾಗಿ ಕಲಬುರಗಿ, ಚಿತ್ರದುರ್ಗ, ಹಾಸನ, ಕೊಪ್ಪಳ, ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್‌ ಜಿಲ್ಲೆಗಳಲ್ಲಿ 9 ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗಿತ್ತು. ಸ್ಥಳೀಯರಿಗೆ ಉದ್ಯೋಗ ಒದಗಿಸುವುದು, ಚೀನಾಕ್ಕೆ ಸಿಕ್ಕಿರುವ ಮಾರುಕಟ್ಟೆಯನ್ನು ಕಸಿದು ನಮ್ಮವರಿಗೆ ಕೊಡುವುದು, ಆ ಮೂಲಕ ಚೀನಾ ಉತ್ಪನ್ನಗಳನ್ನು ಯಶಸ್ವಿಯಾಗಿ ಹೊರ ಹಾಕುವುದು ನನ್ನ ಉದ್ದೇಶವಾಗಿತ್ತು. ಆದರೆ, ಮೈತ್ರಿ ಸರ್ಕಾರದ ಈ ಯೋಜನೆಯನ್ನು ಇಂದಿನ ಸರ್ಕಾರ ಏನು ಮಾಡಿದೆ? ಮುಂದುವರೆಸಿಕೊಂಡು ಹೋಗಿದೆಯೋ ಇಲ್ಲವೋ ತಿಳಿಯದು' ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.