ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಸಂತನಗರದಲ್ಲಿ ನಡೆದಿದೆ. ಕಳೆದ ಮೂರು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸೌಂದರ್ಯ ಇದೀಗ ದಿಢೀರ್ ಆಗಿ ಸಾವಿನ ಕದ ತಟ್ಟಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಮುದ್ದಾದ ಮಗುವಿಗೆ ಜನ್ಮ ನೀಡಿದ್ದ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡಿರುವುದು ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಮಾಜಿ ಸಿಎಂ ಬಿಎಸ್ವೈ ಅವರ ಎರಡನೇ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. 2018ರಲ್ಲಿ ವೈದ್ಯ ಡಾ. ನೀರಜ್ ಅವರನ್ನು ಮದುವೆಯಾಗಿದ್ದರು.
ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇದರ ಬೆನ್ನಲ್ಲೇ ಸೌಂದರ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಮೃತದೇಹವನ್ನ ಈಗಾಗಲೇ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿರಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ
ಅಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುವ ವ್ಯಕ್ತಿ ಹೇಳಿದ್ದೇನು?: ಇಂದು ಬೆಳಗ್ಗೆ 8 ಗಂಟೆಗೆ ಸೌಂದರ್ಯ ಪತಿ ಡಾ. ನೀರಜ್ ಕೆಲಸಕ್ಕೆ ಹೋಗಿದ್ರು. ಆ ವೇಳೆ ಮನೆಯಲ್ಲಿ ಸೌಂದರ್ಯ ಹಾಗೂ 9 ತಿಂಗಳ ಮಗುವಿನೊಂದಿಗೆ ಇದ್ದರು. ಈ ವೇಳೆ ಮನೆ ಕೆಲಸದವರು ಸಹ ಇದ್ದರು. ಈ ಸಮಯದಲ್ಲಿ ರೂಂಗೆ ತೆರಳಿದ ಸೌಂದರ್ಯ ನೇಣು ಹಾಕಿಕೊಂಡಿದ್ದಾರೆ. ತಿಂಡಿ ನೀಡಲು ಕೆಲಸದಾಕೆ ರೂಂಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಅವರು ಈ ಅಪಾರ್ಟ್ಮೆಂಟ್ಗೆ ಬಂದು ಎರಡು ವರ್ಷಗಳಾಗಿದೆ ಎಂದು ತಿಳಿಸಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ