ಬೆಂಗಳೂರು : 2021ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್ನ 'ವರ್ಷದ ವ್ಯಕ್ತಿ ಪ್ರಶಸ್ತಿ'ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಅದೇ ರೀತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಪ್ರೆಸ್‌ಕ್ಲಬ್‌ನ ವಿಶೇಷ ಪ್ರಶಸ್ತಿ ಮತ್ತು ಕೊರೊನಾ ನಿರ್ವಹಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಪ್ರೆಸ್‌ಕ್ಲಬ್‌ನ ವಿಶೇಷ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದಾರೆ.
ಇದರ ಜೊತೆಗೆ ಪ್ರೆಸ್‌ಕ್ಲಬ್‌ನ ವಾರ್ಷಿಕ ಪ್ರಶಸ್ತಿಗೆ 16 ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 6ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ 2020ನೇ ಸಾಲಿನ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿಯಾಗಿ ವಿಪ್ರೋ ಸಂಸ್ಥೆಯ ಅಧ್ಯಕ್ಷ ಅಜೀಂ ಪ್ರೇಮ್ ಜಿ ಮತ್ತು ಚಿತ್ರ ನಟ ಸುದೀಪ್ ಹಾಗೂ ನಾರಾಯಣ ಹೃದಯಾಲಯದ ಡಾ. ದೇವಿಪ್ರಸಾದ್ ಶೆಟ್ಟಿ ಅವರಿಗೆ ವಿಶೇಷ ಪ್ರಶಸ್ತಿ ಹಾಗೂ ಪ್ರೆಸ್‌ಕ್ಲಬ್‌ನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದ 25 ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಗುವುದು.
2020 ಹಾಗೂ 2021ನೇ ಸಾಲಿನ ಎರಡೂ ವರ್ಷದ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಮತ್ತು ವಿಶೇಷ ಪ್ರಶಸ್ತಿ ಹಾಗೂ ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪುರಸ್ಕೃತರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್ ನ ಅಧ್ಯಕ್ಷ ಕೆ.ಸದಾಶಿವ ಶೆಣೈ ಹಾಗೂ ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಕಿರಣ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2021ನೇ ಸಾಲಿನ 'ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಭಾಸ್ಕರ್ ರಾವ್ ಎಂ.ಕೆ., ಪದ್ಮರಾಜ ದಂಡಾವತಿ, ರಂಜಾನ್ ದರ್ಗಾ, ಕೆಸ್ತೂರು ಗುಂಡಪ್ಪ ವಾಸುಕಿ, ಡಾ. ಜಗದೀಶ್ ಕೊಪ್ಪ ಎನ್., ಬಾಲಸುಬ್ರಮಣ್ಯಂ ಕೆ.ಆರ್., ಬಿ.ವಿ. ಶಿವಶಂಕರ, ಯತೀಶ್ ಕುಮಾರ್ ಜಿ.ಡಿ., ಸುದರ್ಶನ್ ಚೆನ್ನಂಗಿಹಳ್ಳಿ, ದೊಡ್ಡ ಬೊಮ್ಮಯ್ಯ, ಕೆ.ಎಂ. ವೀರೇಶ್. ಶ್ರೀಮತಿ ವಾಸಂತಿ ಹರಿಪ್ರಕಾಶ್, ಪ್ರಶಾಂತ್ ನಾಥೂ, ಪ್ರಕಾಶ್ ಬೆಳವಾಡಿ, ಎಸ್.ಹೆಚ್. ಮಾರುತಿ , ಭಾನು ಪ್ರಕಾಶ್ ಚಂದ್ರ
ಇದನ್ನೂ ಓದಿ: ಸಿದ್ದರಾಮಯ್ಯನವರು ಎಲ್ಲಿಗೆ ಹೋದ್ರೂ ಅಲ್ಲಿ ವಿರೋಧವೇ : ಸಚಿವ ಬಿ. ಶ್ರೀರಾಮಲು