ETV Bharat / city

ನಾಯಕನ ಸೃಷ್ಟಿಸುವ ಯೋಗ್ಯತೆ ಇಲ್ಲ, ಪಕ್ಷ ಕಟ್ಟುವ ಧಂ ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​​ಡಿಕೆ ಕಿಡಿ - ಸರಣಿ ಟ್ವೀಟ್​ ಮಾಡಿ ಕಾಂಗ್ರೆಸ್​ ಸಿದ್ದರಾಮಯ್ಯ ವಿರುದ್ಧ ಟೀಕೆ

ಕೆಪಿಸಿಸಿಯಲ್ಲಿ ಶುಕ್ರವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್​ಗೆ ಯಾವುದೇ ಸಿದ್ಧಾಂತವಿಲ್ಲ. ಅದೊಂದು ಅವಕಾಶವಾದಿ ಪಕ್ಷ. ಬಿಜೆಪಿ ಬಾಲಂಗೋಚಿ ಇದ್ದಂತೆ ಎಂದು ಟೀಕಿಸಿದ್ದರು. ಇದು ಹೆಚ್​.ಡಿ.ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಹೀಗಾಗಿ ಸರಣಿ ಟ್ವೀಟ್​ ಮಾಡಿ ಕಿಡಿಕಾರಿದ್ದಾರೆ.

siddaramiah
ಕೆಂಡಾಮಂಡಲ
author img

By

Published : Jan 22, 2022, 3:16 PM IST

ಬೆಂಗಳೂರು: ಜೆಡಿಎಸ್​ ಶಾಸಕರನ್ನು ಸೆಳೆದು ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್​ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿದ್ದಾರೆ. ಅಲ್ಲದೇ, ಜೆಡಿಎಸ್​, ಬಿಜೆಪಿಯ ಬಾಲಂಗೋಚಿ ಎಂದು ಜರಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.

'ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ. ನೀವು ಜೆಡಿಎಸ್‌ ಬಗ್ಗೆ ಮಾತನಾಡುತ್ತೀರಾ' ಎಂದು ಹೆಚ್​ಡಿಕೆ ಪ್ರಶ್ನಿಸಿದ್ದಾರೆ.

  • ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ.. ನೀವಾ ಜೆಡಿಎಸ್‌ ಬಗ್ಗೆ ಮಾತನಾಡುವುದು? 1/7

    — H D Kumaraswamy (@hd_kumaraswamy) January 22, 2022 " class="align-text-top noRightClick twitterSection" data=" ">

ತುಮಕೂರಿನಿಂದ ಜೆಡಿಎಸ್‌ ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್​ನ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ, ಕಾಯಿರಿ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

  • ಕಾಂಗ್ರೆಸ್‌ ಸೇರುವ ಮುನ್ನ ನೀವು ಯಾರ ಬಾಲಂಗೋಚಿ ಆಗಿದ್ದಿರಿ? ಗುರುಸ್ವಾಮಿ ಅವರೆದುರು ಸೋತುಸುಣ್ಣವಾದ ಮೇಲೆ ಅನುಗ್ರಹಕ್ಕೆ ಬಂದು ಯಾರ ಮುಂದೆ ಗಳಗಳನೆ ಅತ್ತು ರಾಜಕೀಯ ಬಿಟ್ಟು, ವಕೀಲಿ ಮಾಡುತ್ತೇನೆ ಎಂದಿರಿ ಅನ್ನುವುದು ನೆನಪಿದೆಯಾ ಸಿದ್ದರಾಮಯ್ಯ? ಆಗ ನಿಮಗೆ ಬಾಲಂಗೋಚಿತನ ನೆನಪಾಗಲಿಲ್ಲವೆ? 3/7

ರಾಜಕೀಯ ಬಿಡ್ತೀನಿ ಅಂದಿದ್ದು ನೆನಪಿದೆಯಾ? ಕಾಂಗ್ರೆಸ್‌ ಸೇರುವ ಮುನ್ನ ನೀವು ಯಾರ ಬಾಲಂಗೋಚಿ ಆಗಿದ್ದಿರಿ? ಗುರುಸ್ವಾಮಿ ಅವರೆದುರು ಸೋತುಸುಣ್ಣವಾದ ಮೇಲೆ ಅನುಗ್ರಹಕ್ಕೆ ಬಂದು ಯಾರ ಮುಂದೆ ಗಳಗಳನೆ ಅತ್ತು ರಾಜಕೀಯ ಬಿಟ್ಟು, ವಕೀಲಿ ಮಾಡುತ್ತೇನೆ ಎಂದಿರಿ ಅನ್ನುವುದು ನೆನಪಿದೆಯಾ ಸಿದ್ದರಾಮಯ್ಯ? ಆಗ ನಿಮಗೆ ಬಾಲಂಗೋಚಿತನ ನೆನಪಾಗಲಿಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪ್ರತಿಯೊಂದಕ್ಕೂ ಈ ಸರ್ಕಾರಕ್ಕೆ ಜೆಡಿಎಸ್‌ ಬೆಂಬಲ ನೀಡುತ್ತಿದೆ ಎನ್ನುವ ನಿಮ್ಮ ʼಸುಳ್ಳು ನಾಲಗೆʼ, ಅದೇ ಸರ್ಕಾರ ಬರಲು ಮೂಲ ಕಾರಣರಾದ ʼಸಿದ್ದಪುರುಷʼ ಯಾರು ಎನ್ನುವುದನ್ನು ಹೇಳಲಿಲ್ಲವೇ? ಪಕ್ಷದ್ರೋಹ ತಾಯಿಗೆ ಮಾಡುವ ದ್ರೋಹಕ್ಕೆ ಸಮಾನ. ನಿಮ್ಮ ದ್ರೋಹ ಮುಚ್ಚಿಟ್ಟುಕೊಳ್ಳಲು ಜೆಡಿಎಸ್‌ ಜಪ ಮಾಡುತ್ತೀರಾ ಸಿದ್ದರಾಮಯ್ಯ ಎಂದು ಕುಟುಕಿದ್ದಾರೆ.

  • ಮತ್ತೆ ಮುಖ್ಯಮಂತ್ರಿ ಆಗಬೇಕೆನ್ನುವ ದುರಾಸೆ, ಅವಕಾಶ ಸಿಗದೇನೋ ಅನ್ನುವ ಹತಾಶೆ. ಅಭ್ಯರ್ಥಿಗಳಿಲ್ಲ, ಜೆಡಿಎಸ್‌ ಬಿಟ್ಟರೆ ಗತಿ ಇಲ್ಲ ನಿಮ್ಮ ಯೋಗ್ಯತೆಗೆ. ನಮ್ಮವರನ್ನು ಹೈಜಾಕ್‌ ಮಾಡಿ ಅವರಿಗೆ ಟಿಕೆಟ್‌ ಆಮಿಷ ತೋರಿಸಿ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗೆ ತಳ್ಳುವ ನಿಮ್ಮ ʼಕಂತ್ರಿʼ ರಾಜಕೀಯ ಎಲ್ಲರಿಗೂ ಗೊತ್ತಿದೆ. 5/7

ಅಭ್ಯರ್ಥಿಗಳಿಲ್ಲದೇ ಜೆಡಿಎಸ್​ನಿಂದ ಹೈಜಾಕ್​.. ಮತ್ತೆ ಮುಖ್ಯಮಂತ್ರಿ ಆಗಬೇಕೆನ್ನುವ ದುರಾಸೆ, ಅವಕಾಶ ಸಿಗದೇನೋ ಅನ್ನುವ ಹತಾಶೆ. ನಿಮ್ಮ ಯೋಗ್ಯತೆಗೆ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲ, ಜೆಡಿಎಸ್‌ ಬಿಟ್ಟರೆ ಗತಿ ಇಲ್ಲ. ನಮ್ಮವರನ್ನು ಹೈಜಾಕ್‌ ಮಾಡಿ ಅವರಿಗೆ ಟಿಕೆಟ್‌ ಆಮಿಷ ತೋರಿಸಿ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗೆ ತಳ್ಳುವ ನಿಮ್ಮ ʼಕಂತ್ರಿʼ ರಾಜಕೀಯ ಎಲ್ಲರಿಗೂ ಗೊತ್ತಿದೆ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಕ್ಕಪಕ್ಕದವರ ತಟ್ಟೆಯಲ್ಲಿರುವುದನ್ನು ಎಗರಿಸುವುದು ಸಿದ್ಧಾಂತವೇ? ʼಆಪರೇಷನ್‌ ಹಸ್ತʼವೂ ಸಿದ್ಧಾಂತವೇ? ಆಶ್ರಯ ಕೊಟ್ಟ ಪಕ್ಷವನ್ನು, ಅಲ್ಲಿನ ಮೂಲನಿವಾಸಿಗಳನ್ನು ಮುಗಿಸುವುದೇ ಸಿದ್ಧಾಂತವೇ?. ನೀವು ಜೆಡಿಎಸ್‌ ಸಿದ್ಧಾಂತದ ಬಗ್ಗೆ ಮಾತನಾಡುತ್ತೀರಿ? ನಾಚಿಕೆಯಾಗಬೇಕು ನಿಮಗೆ ಎಂದು ಹೆಚ್​ಡಿಕೆ ಕೆಂಡಕಾರಿದ್ದಾರೆ.

ವಿನಾಶಕಾಲೇ ವಿಪರೀತ ಸುಳ್ಳು.. ಸುಳ್ಳು ನಿಮ್ಮ ರಾಜಕೀಯದ ಅಡಿಪಾಯ. ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ.. ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣದ ನಿಜಸ್ವರೂಪ. ವಿನಾಶಕಾಲೇ ವಿಪರೀತ ಸುಳ್ಳು ಎಂದು ಹೆಚ್​ಡಿಕೆ ಟ್ವೀಟ್​ ಮೂಲಕವೇ ಹರಿಹಾಯ್ದಿದ್ದಾರೆ.

ಕೆಪಿಸಿಸಿಯಲ್ಲಿ ಶುಕ್ರವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್​ಗೆ ಯಾವುದೇ ಸಿದ್ಧಾಂತವಿಲ್ಲ. ಅದೊಂದು ಅವಕಾಶವಾದಿ ಪಕ್ಷ. ಬಿಜೆಪಿ ಬಾಲಂಗೋಚಿ ಇದ್ದಂತೆ ಎಂದು ಟೀಕಿಸಿದ್ದರು. ಇದು ಹೆಚ್​.ಡಿ. ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಹೀಗಾಗಿ ಸರಣಿ ಟ್ವೀಟ್​ ಮಾಡಿ ಇಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಇಂದಿರಾ ಕ್ಯಾಂಟೀನ್​ಗೆ ಶಿವಕುಮಾರ ಶ್ರೀ ಹೆಸರಿಟ್ಟರೆ ನನಗೂ ಸಂತೋಷ : ಸಚಿವ ಮಾಧುಸ್ವಾಮಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.