ETV Bharat / city

ಡಿಸೈನ್ ವೀರರಿಗೆ ಈಗ ನಮ್ಮ ನೆಲ, ಜಲ ಎನ್ನುವುದು ನೆನಪಿಗೆ ಬಂದಿದೆ: ಡಿಕೆ ಸಹೋದರರಿಗೆ ಹೆಚ್‌ಡಿಕೆ ಡಿಚ್ಚಿ

HD Kumaraswamy tweet: ಡಿ.ಕೆ.ಶಿವಕುಮಾರ್ ಸಹೋದರರ ವಿರುದ್ಧ ಹೆಚ್‌ಡಿಕೆ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಕಲ್ಲುಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಮಾರಾಟ ಮಾಡಿ ಅದರಿಂದ ಕೋಟೆ ಕೊತ್ತಲು ಕಟ್ಟಿಕೊಂಡ ಡಿಸೈನ್ ವೀರರು. ಅವರಿಗೆ ಈಗ ನಮ್ಮ ನೆಲ, ಜಲ ಎನ್ನುವುದು ನೆನಪಿಗೆ ಬಂದಿದೆ ಎಂದು ಟಾಂಗ್​​ ನೀಡಿದ್ದಾರೆ.

Former CM HD Kumaraswamy
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
author img

By

Published : Jan 4, 2022, 11:35 AM IST

ಬೆಂಗಳೂರು: ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ(ಮಾರಾಟ) ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ 'ಡಿಸೈನ್ ವೀರರಿಗೆ' ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? ಎಂದು ಡಿ.ಕೆ.ಶಿವಕುಮಾರ್ ಸಹೋದರರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

  • ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ? 1/5

    — H D Kumaraswamy (@hd_kumaraswamy) January 4, 2022 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಕನಕಪುರ, ರಾಮನಗರ ಯಾರೊಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು, ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ?. ಆ ಕ್ಷಣ ಹತ್ತಿರ ಬಂದಿದೆಯೇನೋ ಎಂದು ಹೇಳಿದ್ದಾರೆ.

  • ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ. 4/5

ನಾವು ಹಾಸನದಿಂದ ಬಂದಿದ್ದೇವೆ ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ ಎಂದು ಹೆಚ್​ಡಿಕೆ ತಿರುಗೇಟು ನೀಡಿದ್ದಾರೆ.

ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

  • ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು. 5/5

ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡ್ತಾರೆ. ಕೆಲವೊಮ್ಮೆ ಬಿಟ್ಟೂ ನೋಡ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೆ ಬಿಟ್ಟಿದ್ದು ಎಂದು ಹೆಚ್​ಡಿಕೆ ಡಿಕೆಶಿ ಸಹೋದರರಿಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಕೋವಿಡ್ ಅವಾಂತರ: ಒಂದು ಲಕ್ಷಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.