ETV Bharat / city

ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರಕ್ಕೆ ಜನ ಹಾದಿಬೀದಿಯಲಿ ನಗಾಡುವಂತಾಗಿದೆ : ಹೆಚ್​​ಡಿಕೆ - SSLC and PUC exam

ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಬಿಟ್ಟು, ಶಿಕ್ಷಣ ಸಚಿವರು ಎಡಬಿಡಂಗಿ ನಿರ್ಧಾರ ತೆಗೆದು ಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು. ಎಸ್​​​ಎಸ್​​​ಎಲ್​​ಸಿ ಮತ್ತು ಪಿಯುಸಿ ಮಕ್ಕಳಿಗೆ ಏಕರೂಪ ಪರೀಕ್ಷಾ ಪದ್ಧತಿ ಜಾರಿಗೆ ತರಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ ಎಂದಾದರೆ ಅದು ಅವರಿಗಿಂತ ಕಿರಿಯರಾದ ಎಸ್​​​ಎಸ್​​​ಎಲ್​​ಸಿ ವಿದ್ಯಾರ್ಥಿಗಳಿಗೂ ಅನ್ವಯಿಸಬೇಕು..

former-cm-hd-kumarswamy
ಹೆಚ್​​ಡಿಕೆ
author img

By

Published : Jun 4, 2021, 3:22 PM IST

Updated : Jun 4, 2021, 9:53 PM IST

ಬೆಂಗಳೂರು : ಕೋವಿಡ್‌ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಓದಿ: ಎಸ್ಎಸ್ಎಲ್​ಸಿ ಪರೀಕ್ಷೆ ಬಗ್ಗೆ ಸಿಎಂ ಯಡಿಯೂರಪ್ಪ ಮಹತ್ವದ ಹೇಳಿಕೆ

ಈ ಕುರಿತು ಟ್ವೀಟ್ ಮಾಡಿರುವ ಅವರು, ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ-ಬೀದಿಯಲ್ಲಿ ನಗಾಡುವಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಸರ್ಕಾರ ತಕ್ಷಣ ಇಂತಹ ಮತಿಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ, ಎಸ್​​​ಎಸ್​​​ಎಲ್​​ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಬಿಟ್ಟು, ಶಿಕ್ಷಣ ಸಚಿವರು ಎಡಬಿಡಂಗಿ ನಿರ್ಧಾರ ತೆಗೆದು ಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು. ಎಸ್​​​ಎಸ್​​​ಎಲ್​​ಸಿ ಮತ್ತು ಪಿಯುಸಿ ಮಕ್ಕಳಿಗೆ ಏಕರೂಪ ಪರೀಕ್ಷಾ ಪದ್ಧತಿ ಜಾರಿಗೆ ತರಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ ಎಂದಾದರೆ ಅದು ಅವರಿಗಿಂತ ಕಿರಿಯರಾದ ಎಸ್​​​ಎಸ್​​​ಎಲ್​​ಸಿ ವಿದ್ಯಾರ್ಥಿಗಳಿಗೂ ಅನ್ವಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನಮಂತ್ರಿಯ 'ಗುಮ್ಮ'ಕಾರಣ. ಎಸ್​​​ಎಸ್​​​ಎಲ್​​ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವರೋ? ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾ ಮಂತ್ರಿಯೋ?, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಷಯದಲ್ಲಿ ಮೌನಿ ಆಗಿರುವ ಶಿಕ್ಷಣ ಸಚಿವರು, ಬಿಸಿ ಊಟ ಸಿಗದೆ ಕಂಗಾಲಾಗಿರುವ ಬಡ ವಿದ್ಯಾರ್ಥಿಗಳ ಬಗ್ಗೆ ಮಾತನಾಡುವುದಿಲ್ಲ. ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಾಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಮಾಡುವ ಕಡೆ ಚಿತ್ತ ಹರಿಸಲಿ ಎಂದಿದ್ದಾರೆ.

Last Updated : Jun 4, 2021, 9:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.