ETV Bharat / city

ಬಿಜೆಪಿಯಲ್ಲಿದ್ದವರು ಮಾತ್ರ ಹಿಂದೂಗಳೇ?: ಆರ್​ಎಸ್​ಎಸ್​ ನಾಯಕರಿಗೆ ಸಿದ್ದರಾಮಯ್ಯ ಪ್ರಶ್ನೆ - ಆರ್​ಎಸ್​ಎಸ್​ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಪ್ರಶ್ನೆ

ಆರ್​ಎಸ್​ಎಸ್​ ಸಂಘಟನೆಯ ನಿಲುವು ಮತ್ತು ಸಿದ್ಧಾಂತವನ್ನು ಪ್ರಶ್ನಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಿಂದೂ ಆಗಿರಲು ಯಾವ ಅರ್ಹತೆ ಇರಬೇಕು, ಬಿಜೆಪಿಯಲ್ಲಿದ್ದವರು ಮಾತ್ರ ಹಿಂದೂಗಳೇ ಎಂದು ಆರ್​ಎಸ್​ಎಸ್​ ನಾಯರನ್ನು ಪ್ರಶ್ನಿಸಿ ಸರಣಿ ಟ್ವೀಟ್​ ಮಾಡಿದ್ದಾರೆ.

former-cm-siddaramaiah-criticize-over-rss-leaders
ಆರ್​ಎಸ್​ಎಸ್​ ನಾಯಕರಿಗೆ ಸಿದ್ದರಾಮಯ್ಯ ಪ್ರಶ್ನೆ
author img

By

Published : May 28, 2022, 10:54 PM IST

ಬೆಂಗಳೂರು: ರಾಷ್ಟ್ರೀಯ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ಪ್ರತಿಪಕ್ಷ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಬೇಸರ ಹೊರಹಾಕಿರುವ ಅವರು, ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಸಂಘಟನೆಯನ್ನು, ಉತ್ತರಿಸುತ್ತಿರುವವರು ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್.ಎಸ್.ಎಸ್ ನಾಯಕರು ಓದು ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ ಎಂದು ಕುಟುಕಿದ್ದಾರೆ.

ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು ಬಿಜೆಪಿ ಪಕ್ಷವನ್ನು ಮಾತ್ರ ಬೆಂಬಲಿಸುತ್ತಾರೆ. ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ? ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು? ಎಂದು ಪ್ರಶ್ನಿಸಿದ್ದಾರೆ.

  • ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ. 5/12#AryanRSS

    — Siddaramaiah (@siddaramaiah) May 28, 2022 " class="align-text-top noRightClick twitterSection" data=" ">

ಹಿಂದು ಆಗಲು ಕಮಿಷನ್​ ತಗೋಬೇಕಾ?: ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳಲ್ಲವೇ? ಆ ಸಂಘಟನೆಯ ದೃಷ್ಟಿಯಲ್ಲಿ ಹಿಂದೂ ಆಗಲೂ ಶೇ 40 ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್​ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು ಎಂದು ಕೇಳಿದ್ದಾರೆ.

  • ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು?
    ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳಲ್ಲವೇ? 4/12#AryanRSS

ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ?. ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಿಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್​ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

  • ನಾನು ಪ್ರಶ್ನೆ ಮಾಡಿದ್ದು ಆರ್.ಎಸ್.ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು @BJP4Karnataka ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ?
    ಆರ್.ಎಸ್.ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ?
    ಅವರೇ ಉತ್ತರಿಸಲಿ. 1/12#AryanRSS

ಹಿಂದೂ ಆಗಿರಲು ಬಿಜೆಪಿ ಸೇರಿರಬೇಕಾ?: ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ- ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಪಕ್ಷದ ಸದಸ್ಯರಾಗಬೇಕಾ?. ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ? ಹಿಂದೂ ಧರ್ಮದೊಳಗಿನ ಅನಿಷ‍್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ ಎಂದಿದ್ದಾರೆ.

  • ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ.

    ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ?
    ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ?
    ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? 11/12#AryanRSS

ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ. ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ?, ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ? ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸವಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೇ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ. ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ ಎಂದು ಸವಾಲು ಹಾಕಿದ್ದಾರೆ.

ಓದಿ: ಯಾರಿಗೋ ಕಹಿಯಾಗುತ್ತೆ ಎಂದು ಹೆಡಗೇವಾರ್​ ವಿಚಾರ ಕೈಬಿಡಲು ಸಾಧ್ಯವಿಲ್ಲ: ಸಚಿವ ಸುನಿಲ್ ಕುಮಾರ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.