ETV Bharat / city

ದಪ್ಪ ಚರ್ಮದ ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಹೋರಾಟ ಅನಿವಾರ್ಯ: ಸಿದ್ದರಾಮಯ್ಯ

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಪರಿಸ್ಥಿತಿ ನಿರ್ವಹಣೆಗೆ ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡದೆ ಜನರಿಗೆ ಎರಡೂ ಸರ್ಕಾರಗಳು ದ್ರೋಹ ಮಾಡಿವೆ. ದೇಶದ ಹಣಕಾಸು ಪರಿಸ್ಥಿತಿ‌ ಮೊದಲೇ ಚೆನ್ನಾಗಿರಲಿಲ್ಲ. ಇದೀಗ ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಬಡಿದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

Former CM Siddaramaiah statement
ದಪ್ಪ ಚರ್ಮದ ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಹೋರಾಟ ಅನಿವಾರ್ಯ: ಮಾಜಿ ಸಿಎಂ ಸಿದ್ದರಾಮಯ್ಯ
author img

By

Published : Jun 27, 2020, 6:02 PM IST

ಬೆಂಗಳೂರು: ದಪ್ಪ ಚರ್ಮದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಪಕ್ಷದ ವತಿಯಿಂದ ತೀವ್ರ ಸ್ವರೂಪದ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಅತ್ಯಂತ ದುಬಾರಿಯಾಗಿದೆ. ಬೆಲೆ ಏರಿಕೆ ಖಂಡಿಸುವುದರ ಜೊತೆಗೆ ಜನಪರ ಹೋರಾಟ ಕೈಗೆತ್ತಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಳೆದ ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರ್ಕಾರ ಸುಮಾರು 18 ಲಕ್ಷ ಕೋಟಿ ಸಂಗ್ರಹ ಮಾಡಿರುವ ಮಾಹಿತಿ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್, ಡೀಸೆಲ್ 25 ರೂ. ಆಸುಪಾಸಿನಲ್ಲಿ ಮಾರಾಟವಾಗಬೇಕಿತ್ತು ಎಂದರು.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಪರಿಸ್ಥಿತಿ ನಿರ್ವಹಣೆಗೆ ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡದೆ ಜನರಿಗೆ ಎರಡೂ ಸರ್ಕಾರಗಳು ದ್ರೋಹ ಮಾಡಿವೆ. ದೇಶದ ಹಣಕಾಸು ಪರಿಸ್ಥಿತಿ‌ ಮೊದಲೇ ಚೆನ್ನಾಗಿರಲಿಲ್ಲ. ಇದೀಗ ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಬಡಿದಿದೆ ಎಂದು ಟೀಕಿಸಿದರು. ಲಾಕ್​ಡೌನ್ ತೆಗೆದ ಬಳಿಕ ಕೊರೊನಾ ಸೋಂಕು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಆದರೆ ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ.

ರೈತರು ಮತ್ತಿತರ ಸಮುದಾಯಗಳಿಗೆ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಈವರೆಗೆ ತಲುಪಿಲ್ಲ. ಲಾಕ್​ಡೌನ್ ಸಮಯದಲ್ಲೇ ಜನರ ಕೈಗೆ ಹಣ ಕೊಟ್ಟಿದ್ದರೆ ಅವರಿಗೆ ಈಗ ಕಷ್ಟ ಬರುತ್ತಿರಲಿಲ್ಲ. ಕೊರೊನಾ ವಿಚಾರದಲ್ಲಿ ದೇಶದ ಸ್ಥಿತಿ ಕೆಟ್ಟದಾಗಿದೆ. ಮುಂದೆ ನಾವು ಅಮೆರಿಕ ಮೀರಿಸುವ ಪರಿಸ್ಥಿತಿ ಇದೆ. ಜಿಡಿಪಿಯಲ್ಲಿ ಶೇ. 1ರಷ್ಟನ್ನೂ‌ ಸರ್ಕಾರ ಸೋಂಕು ನಿಯಂತ್ರಣಕ್ಕೆ ಖರ್ಚು ಮಾಡಿಲ್ಲ ಎಂದು ಕಿಡಿಕಾರಿದರು.

ಎಪಿಎಂಸಿ ರಾಜ್ಯದ ಪಟ್ಟಿಯಲ್ಲಿ ಬರುವ ವಿಷಯ. ಆದರೂ ಕೇಂದ್ರ ಸರ್ಕಾರ ಮೂಗು ತೂರಿಸುತ್ತಿದೆ. ರಾಜ್ಯ ಸರ್ಕಾರ ಕೇಂದ್ರದ ಗುಲಾಮನಂತೆ ವರ್ತಿಸುತ್ತಿದೆ. ತಿದ್ದುಪಡಿ ಆರಂಭದಲ್ಲಿ ಚೆನ್ನಾಗಿ ಕಂಡರೂ ಮುಂದಿನ ದಿನಗಳಲ್ಲಿ ರೈತರು ಬೀದಿಪಾಲಾಗುತ್ತಾರೆ. ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ.‌ ಉಳುವವನಿಗೆ ಭೂಮಿ ಕೊಡಬೇಕು. ಬಡವರಿಗೆ ಭೂಮಿ ಹಂಚಬೇಕು ಎಂಬುದು ಕಾಂಗ್ರೆಸ್ ಪಕ್ಷದ ನಿಲುವು. ಇದನ್ನೇ ಡಾ. ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದರು.

ಉದ್ದೇಶಿತ ತಿದ್ದುಪಡಿ ಪ್ರಕಾರ, ಯಾರು ಬೇಕಾದರೂ ಕೃಷಿ ಭೂಮಿ‌ ಖರೀದಿಸಬಹುದು. ನಾವು ಉಳುವವರಿಗೆ ಭೂಮಿ ಕೊಟ್ಟರೆ, ಸರ್ಕಾರ ಉಳ್ಳವರಿಗೆ ಕೃಷಿ ಭೂಮಿ ಧಾರೆ ಎರೆಯಲು ಮುಂದಾಗಿದೆ. ಇದರ ವಿರುದ್ಧವೂ ತೀವ್ರ ಸ್ವರೂಪದ ಹೋರಾಟ ಅನಿವಾರ್ಯ ಎಂದರು. ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಜೈಲ್ ಭರೋ ಸೇರಿದಂತೆ ನಾನಾ ರೀತಿಯ ಹೋರಾಟಗಳನ್ನ ರೂಪಿಸಬೇಕಾಗುತ್ತದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.