ಬೆಂಗಳೂರು: ಉತ್ತರ ಕರ್ನಾಟಕ ಅದರಲ್ಲೂ ತಮ್ಮ ಕ್ಷೇತ್ರವಾದ ಬಾದಾಮಿಯಲ್ಲಿ ಅತಿವೃಷ್ಟಿಯಿಂದಾಗಿ ಸಮಸ್ಯೆಗೆ ಒಳಗಾಗಿರುವ ಜನರ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
-
ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ.
— Siddaramaiah (@siddaramaiah) August 19, 2020 " class="align-text-top noRightClick twitterSection" data="
ಇದಕ್ಕಾಗಿ ಕ್ಷಮೆ ಇರಲಿ.
ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.
3/3
">ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ.
— Siddaramaiah (@siddaramaiah) August 19, 2020
ಇದಕ್ಕಾಗಿ ಕ್ಷಮೆ ಇರಲಿ.
ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.
3/3ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ.
— Siddaramaiah (@siddaramaiah) August 19, 2020
ಇದಕ್ಕಾಗಿ ಕ್ಷಮೆ ಇರಲಿ.
ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.
3/3
ಟ್ವೀಟ್ ಮೂಲಕ ಈ ಆಗ್ರಹ ಮಾಡಿರುವ ಅವರು, ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದೆ. ರಾಜ್ಯ ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ, ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಚಿವರನ್ನ ಕಳಿಸಿ ಗೃಹ ಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ. ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ? ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೇ, ಮೊದಲು ಇವರನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ ಎಂದು ಸಲಹೆ ನೀಡಿದ್ದಾರೆ.
ನಾನು ತೆರಳುವ ಸ್ಥಿತಿಯಲ್ಲಿಲ್ಲ, ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೊನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.