ETV Bharat / city

ರೋಹಿತ್​ ಚಕ್ರತೀರ್ಥ ಸಮಿತಿಯ ಎಲ್ಲ ಪರಿಷ್ಕರಣೆ ತಿದ್ದುಪಡಿ ಮಾಡಿ: ಸಿದ್ದರಾಮಯ್ಯ - ರೋಹಿತ್​ ಚಕ್ರತೀರ್ಥ ಪರಿಷ್ಕರಣೆಗೆ ಸಿದ್ದರಾಮಯ್ಯ ವಿರೋಧ

ರೋಹಿತ್​ ಚಕ್ರತೀರ್ಥ ಸಮಿತಿ ಪರಿಷ್ಕರಿಸಿದ ಪಠ್ಯಪುಸ್ತಕದಲ್ಲಿನ 7-8 ತಿದ್ದುಪಡಿಗಳನ್ನು ಮಾಡಲು ಸರ್ಕಾರ ಮುಂದಾಗಿದೆ. ಇದು ಸರಿಯಲ್ಲ. ಎಲ್ಲ ಪರಿಷ್ಕರಣೆಗಳನ್ನು ತಿದ್ದುಪಡಿ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರೋಹಿತ್​ ಚಕ್ರತೀರ್ಥ ಸಮಿತಿಯ ಎಲ್ಲ ಪರಿಷ್ಕರಣೆ ತಿದ್ದುಪಡಿ ಮಾಡಿ: ಸಿದ್ದರಾಮಯ್ಯ

author img

By

Published : Jun 30, 2022, 9:39 PM IST

ಬೆಂಗಳೂರು: ರಾಜ್ಯ ಸರ್ಕಾರ ಪಠ್ಯಪುಸ್ತಕದಲ್ಲಿ ಏಳೆಂಟು ತಿದ್ದುಪಡಿಗಳನ್ನು ಮಾತ್ರ ಮಾಡುವ ಮೂಲಕ ತಿಪ್ಪೆ ಸಾರಿಸುವ ಕಾರ್ಯ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಲೋಪ ದೋಷಗಳಾಗಿವೆ ಎಂದು ಸರ್ಕಾರ ಕೊನೆಗೂ ಒಪ್ಪಿಕೊಂಡಿದೆ. 1 ರಿಂದ 10 ನೇ ತರಗತಿಯವರೆಗಿನ ಕನ್ನಡ ಭಾಷಾ ಪಠ್ಯ ಪುಸ್ತಕ, ಸಮಾಜ ವಿಜ್ಞಾನ ಪಠ್ಯಪುಸ್ತಕ ಹಾಗೂ ಸೀಮಿತ ತರಗತಿಗಳ ಪರಿಸರ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 83 ಕಡೆ ತಿದ್ದುಪಡಿಗಳನ್ನು ಮಾಡಲಾಗಿದೆ ಎಂಬ ಮಾಹಿತಿ ಇದೆ. ಮಾಡಿರುವ ತಿದ್ದುಪಡಿಗಳಲ್ಲಿ ಬಹುತೇಕ ವಿವರಗಳು ಜೀವ ವಿರೋಧಿ ನಿಲುವಿನಿಂದ ಕೂಡಿವೆ ಎಂಬುದು ನಾಡಿನ ಶಿಕ್ಷಣ ತಜ್ಞರ ಅಭಿಪ್ರಾಯವಾಗಿದೆ ಎಂದಿದ್ದಾರೆ.

ಶಿಫಾರಸು ಪರಿಶೀಲಿಸಿ: ಸರ್ಕಾರ ತನ್ನ ಆದೇಶದಲ್ಲಿ ಏಳೆಂಟು ತಿದ್ದುಪಡಿಗಳನ್ನಷ್ಟೆ ಮಾಡಿ ತಿಪ್ಪೆ ಸಾರಿಸುವ ಕೆಲಸ ಮಾಡುತ್ತಿದೆ. ಇದು ಸರಿಯಾದ ಕ್ರಮವಲ್ಲ. ರೋಹಿತ್ ಚಕ್ರತೀರ್ಥ ಸಮಿತಿ ಮಾಡಿರುವ ಶಿಫಾರಸ್ಸುಗಳು ನಾಡಿನ ಜ್ಞಾನ ಪರಂಪರೆಗೆ ಅನುಗುಣವಾಗಿವೆಯೆ? ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತವೆಯೆ? ಮಕ್ಕಳಿಗೆ ಕಲಿಸುವ ಸಂಗತಿಗಳು ದೇಶದ ಹಾಗೂ ಜಗತ್ತಿನ ವಿವಿಧ ಜ್ಞಾನ ಶಾಖೆಗಳ ವಿದ್ವಾಂಸರು ಒರೆಗೆ ಹಚ್ಚಿ, ಪರಿಶೀಲಿಸಿ ಸರ್ವ ಸಮ್ಮತಿಯ ಅಭಿಪ್ರಾಯಕ್ಕೆ ಬರಲಾಗಿದೆಯೆ? ಎಂಬ ಅಂಶಗಳೆಲ್ಲ ಮೊದಲು ಇತ್ಯರ್ಥವಾಗಬೇಕಾಗುತ್ತದೆ ಎಂದಿದ್ದಾರೆ.

ಕಲಿಸುವ ಮುನ್ನ ಒರೆಗೆ ಹಚ್ಚಿ: ಯುಪಿಎಸ್‍ಸಿ, ಕೆಪಿಎಸ್‍ಸಿ ಮುಂತಾದ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಪರೀಕ್ಷೆಗಳಲ್ಲಿ ಹಾಗೂ ಜಗತ್ತಿನ ಬೇರೆ ಬೇರೆ ಕಾಲೇಜು, ವಿಶ್ವವಿದ್ಯಾಲಯಗಳಿಗೆ ಕಲಿಯಲು ಇಚ್ಛಿಸುವವರು ಸತ್ಯ ಸಂಗತಿಗಳಿಗೆ ವಿರುದ್ಧವಾದ ಅಂಶಗಳನ್ನು ಬರೆದು ಅಲ್ಲಿನ ಪರೀಕ್ಷೆಗಳಲ್ಲಿ ಪಾಸು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಮಗ್ರ ತಿದ್ದುಪಡಿಗಳನ್ನು ಪರಿಶೀಲನೆ ಮಾಡಿದ ನಂತರವೇ ಮಕ್ಕಳಿಗೆ ಕಲಿಸಬೇಕು ಎಂದು ಹೇಳಿದ್ದಾರೆ.

ಕೂಡಲೆ ಅವಾಂತರಕಾರಿಯಾಗಿರುವ ಪುಸ್ತಕಗಳನ್ನು ವಾಪಸ್ಸು ಪಡೆದು, ಈ ಎಲ್ಲ ಅವಾಂತರಗಳು ಸರಿಯಾಗುವವರೆಗೆ ಬರಗೂರು ಸಮಿತಿಯು ಸಿದ್ಧಪಡಿಸಿದ್ದ ಪಠ್ಯ ಪುಸ್ತಕಗಳನ್ನೆ ಮುಂದುವರೆಸಬೇಕೆಂದು ಹಾಗೂ ಈ ಅವಾಂತರಗಳಿಗೆಲ್ಲ ಕಾರಣ ಕರ್ತರಾಗಿರುವವರೆಲ್ಲರಿಂದ ನಷ್ಟ ವಸೂಲಿ ಮಾಡಿ, ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಓದಿ: ಜಿಎಸ್‌ಟಿ ಪರಿಹಾರ ಮುಂದುವರೆಸುವಂತೆ ಕೇಂದ್ರಕ್ಕೆ ಸಿದ್ದರಾಮಯ್ಯ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.