ETV Bharat / city

ನಿರುದ್ಯೋಗಕ್ಕೆ ಮದ್ದು ಅರೆಯದ ಕೇಂದ್ರ ಸರ್ಕಾರ.. ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಉದ್ಯೋಗ ಸೃಷ್ಟಿಯಲ್ಲಿ ಸರ್ಕಾರ ಎಡವಿದೆ. ಇದರಿಂದ ವಿದ್ಯಾವಂತರು ದೇಶ ತೊರೆಯುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

author img

By

Published : Jun 7, 2022, 8:03 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 8 ವರ್ಷದಲ್ಲಿ ನಿರುದ್ಯೋಗಿ ಯುವ ಜನತೆಗೆ ನರಕ ತೋರಿಸಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಟು ಟೀಕೆ ಮಾಡಿದ್ದಾರೆ.

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವುದೇ ದೇಶದ ಆರ್ಥಿಕತೆಗೆ ವೇಗ ಬರುವುದು ಅಲ್ಲಿನ ಯುವಜನತೆ ದುಡಿಮೆಯಲ್ಲಿ ತೊಡಗಿಕೊಂಡಾಗ ಮಾತ್ರ. ಜನರು ಖರ್ಚು ಮಾಡುತ್ತಿದ್ದರೆ ದೇಶದ ಆರ್ಥಿಕತೆಯ ಬೆಳವಣಿಗೆ ಸಮರ್ಪಕವಾಗಿರುತ್ತದೆ. ದೇಶವನ್ನು ಮುನ್ನಡೆಸುವ ಜವಾಬ್ಧಾರಿ ಹೊತ್ತವರಿಗೆ ಇಷ್ಟು ಜ್ಞಾನವಿಲ್ಲದೇ ಹೋದರೆ, ಅಂಥ ದೇಶ ಅರಾಜಕತೆಯತ್ತ ಸಾಗಿ ಅಧೋಗತಿಗೆ ಇಳಿಯುತ್ತದೆ. ಇದಕ್ಕೆ ಭಾರತವೇ ಉದಾಹರಣೆ ಎಂದಿದ್ದಾರೆ.

ಇಂಜಿನಿಯರಿಂಗ್ ಮುಂತಾದ ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ದೇಶದ ಯುವ ಜನತೆ ಕೆಲಸ ಕೇಳಿದರೆ ಮೋದಿಯವರು ಪಕೋಡ ಮಾರಿ ಎನ್ನುತ್ತಾರೆ. ದೇಶದ ಕೋಟ್ಯನುಕೋಟಿ ಪದವೀಧರರು ಹಳ್ಳಿಗಳಲ್ಲಿ ಅವಮಾನ ಅನುಭವಿಸುತ್ತಿದ್ದಾರೆ. ನಗರಗಳಲ್ಲಿ ಸೆಕ್ಯುರಿಟಿ ಗಾರ್ಡುಗಳಾಗಿ, ಟ್ಯಾಕ್ಸಿ ಚಾಲಕರಾಗಿ, ಸ್ವಿಗ್ಗಿ, ಜೊಮ್ಯಾಟೊಗಳಲ್ಲಿ ಸೇಲ್ಸ್​ಮ್ಯಾನ್​ ಆಗಿ, ಗಾರ್ಮೆಂಟ್​ಗಳಲ್ಲಿ 8- 10 ಸಾವಿರಕ್ಕೆ ದುಡಿಯುತ್ತಿದ್ದಾರೆ ಎಂದು ಹೇಳಿದ್ದಾರೆ.

ದೇಶ ತೊರೆಯುತ್ತಿರುವ ವಿದ್ಯಾವಂತರು: ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ 2014 ರಿಂದ 2021 ರ ನಡುವಿನ 7 ವರ್ಷಗಳಲ್ಲಿ 8 ಲಕ್ಷ ಜನ ಭಾರತದ ನಾಗರಿಕತ್ವವನ್ನೇ ತೊರೆದು ಬೇರೆ ದೇಶಗಳಿಗೆ ಹೋಗಿ ನೆಲೆಸಿದ್ದಾರೆ. ವಿಜ್ಞಾನ, ಅರ್ಥಶಾಸ್ತ್ರ, ಇಂಜಿನಿಯರಿಂಗ್, ಬಾಹ್ಯಾಕಾಶ ಮುಂತಾದ ಕ್ಷೇತ್ರಗಳಲ್ಲಿನ ಬುದ್ಧಿವಂತ ಯುವಕರು ದೇಶದಲ್ಲಿ ಭವಿಷ್ಯ ರೂಪಿಸಿಕೊಳ್ಳುವ ಅವಕಾಶ ಮತ್ತು ಭರವಸೆಗಳನ್ನು ಕಾಣದೇ ದೇಶ ತೊರೆಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಉದ್ಯೋಗಗಳು ಖೋತಾ: ಭಾರತೀಯರ ತಲಾವಾರು ಆದಾಯದ ಜಿಡಿಪಿ 2020 ರಲ್ಲಿ 1877 ಡಾಲರುಗಳಷ್ಟಾಗಿದೆ. ಇನ್ನು 15 ವರ್ಷಕ್ಕೆ ಭಾರತ ವಯಸ್ಕರ ದೇಶವಾಗುತ್ತದೆ. ದುಡಿಮೆಯ ಶಕ್ತಿ ಕ್ಷೀಣಿಸುತ್ತಾ ಹೋಗುತ್ತದೆ. ಆಗ ಅಭಿವೃದ್ಧಿಯನ್ನು ಸಾಧಿಸುವುದು ಹೇಗೆ? ಮೋದಿಯವರು 2014 ರಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಯ ಮಾತನ್ನಾಡಿದ್ದರು. ಆ ಉದ್ಯೋಗಗಳು ಎಲ್ಲಿಗೆ ಹೋದವು? 2020 ರಲ್ಲಿ ದೇಶದ 11,716 ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರದ ಎನ್‌ಸಿಆರ್‌ಬಿ ದಾಖಲೆಗಳು ಹೇಳುತ್ತಿವೆ. ಇದರಲ್ಲಿ ಕರ್ನಾಟಕದ ಉದ್ಯಮಿಗಳು 1772. ಇದು 2019 ಕ್ಕೆ ಹೋಲಿಸಿದರೆ ಶೇ.103 ರಷ್ಟು ಹೆಚ್ಚು ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ನಿರುದ್ಯೋಗದ ಪ್ರಮಾಣ ತನ್ನೆಲ್ಲ ಮಿತಿಗಳನ್ನು ಮೀರಿದೆ. ಬಿಜೆಪಿ ಮತ್ತು ಮೋದಿಯವರ ದುರಾಡಳಿತದಿಂದಾಗಿಯೇ ಈ ದುಃಸ್ಥಿತಿ ಬಂದೊದಗಿದೆ. ರೊಚ್ಚಿಗೆದ್ದ ನಿರುದ್ಯೋಗಿ ಪದವೀಧರರ ರಟ್ಟೆಯ ಸಿಟ್ಟು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗದಂತೆ ತಡೆಯುವ ಸಲುವಾಗಿಯೇ ನಿರುದ್ಯೋಗಿ ಯುವ ಸಮೂಹದ ಕೈಗೆ ತ್ರಿಶೂಲ, ಮಾರಕಾಸ್ತ್ರ ನೀಡಿ ಜಾತಿ- ಧರ್ಮದ ಹೆಸರಿನಲ್ಲಿ ಪರಸ್ಪರ ಕಚ್ಚಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಓದಿ: ಚಡ್ಡಿ ಮಾನವ ಕುಲದ‌ ಗೌರವ ಕಾಪಾಡುವ ಸಂಕೇತ: ಛಲವಾದಿ ನಾರಾಯಣ ಸ್ವಾಮಿ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.