ಬೆಂಗಳೂರು: ನನ್ನ ಬದುಕಿನಲ್ಲಿ ಹೊಸ ಪರ್ವ ಶುರುವಾಗಿದೆ. ದೇಶದಲ್ಲಿ ಇವತ್ತು ಒನ್ ನೇಷನ್, ಒನ್ ಲೀಡರ್, ಒನ್ ಪಾರ್ಟಿ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಇಡೀ ದೇಶವೇ ಮೆಚ್ಚಿದೆ. ಮುಖ್ಯಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಮೇಲೆ ವಿಶ್ವಾಸ ಇಟ್ಟು ಬಿಜೆಪಿ ಸೇರಿದ್ದೇನೆ. ಯಾವುದೇ ಷರತ್ತಿಲ್ಲದೇ ಸೇರ್ಪಡೆ ಆಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಬೆಂಗಳೂರಿನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿ ಅವರ ಅಲೆಯಿದೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಮೇಲೆ ನಂಬಿಕೆ ಇಟ್ಟುಕೊಂಡು ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ಅವರು ತಿಳಿಸಿದರು.
ಇದಕ್ಕೂ ಮುನ್ನ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ, ಅದನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕಳುಹಿಸಿದ್ದರು. ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಡಿ. ಕೆ. ಶಿವಕುಮಾರ್, ಪ್ರಮೋದ್ ಮಧ್ವರಾಜ್ ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.
ಕೆಬಿ ಕೃಷ್ಣಮೂರ್ತಿ ಕಾಂಗ್ರೆಸ್ಗೆ ಗುಡ್ಬೈ: ಇನ್ನು ರಾಜ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭೆ ಪ್ರವೇಶಿಸಿರುವ ಕೆಬಿ ಕೃಷ್ಣಮೂರ್ತಿ ಅವರೂ ಕೂಡ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ತೀರ್ಮಾನಿಸಿದ್ದು, ಕೇಸರಿ ಪಡೆ ಸೇರುವ ಸಾಧ್ಯತೆ ಇದೆ.
ಓದಿ: ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಮಾಜಿ ಶಾಸಕ: ಬಿಜೆಪಿಗೆ ಸೇರ್ಪಡೆ