ETV Bharat / city

ಬಿ.ಸಿ. ಪಾಟೀಲ್ ನಿಜವಾದ ಊಸರವಳ್ಳಿ: ಮಾಜಿ ಸಚಿವ ಸಾ.ರಾ. ಮಹೇಶ್ ತಿರುಗೇಟು - ಆಸೆಗಾಗಿ ಬಣ್ಣ ವೇಷ ಬದಲಿಸುವ ಜಾಯಮಾನ ಕೃಷಿ ಸಚಿವ

ಪೂರ್ವಾಶ್ರಮದಲ್ಲಿ ಪೊಲೀಸ್ ಇಲಾಖೆಯಲ್ಲಿದ್ದ ಬಿ ಸಿ ಪಾಟೀಲರಿಗೆ ಇಂತಹ ಮಾಫಿಯಾಗಳ ಬಗ್ಗೆ ಅರಿವಿಲ್ಲ ಎಂದರೆ ಅವರು ಪಾಲಿಸಿದ ವೃತ್ತಿನಿಷ್ಠೆ ಏನೆಂಬುದು ನಗೆಪಾಟಲಿನ ಸಂಗತಿ. ಎಂತೆಂತಹ ಊಸರವಳ್ಳಿಗಳು ಪೊಲೀಸ್ ಇಲಾಖೆಯಲ್ಲಿ ಇದ್ದರು ಎಂಬ ಬಗ್ಗೆ ಮರುಕವಿದೆ ಎಂದು ಜೆಡಿಎಸ್​ ಶಾಸಕ ಸಾ.ರಾ. ಮಹೇಶ್ ಕುಟುಕಿದ್ದಾರೆ.

former minister sara mahesh talk about bc patil
ಬಿ.ಸಿ. ಪಾಟೀಲ್ ನಿಜವಾದ ಊಸರವಳ್ಳಿ: ಮಾಜಿ ಸಚಿವ ಸಾ.ರಾ. ಮಹೇಶ್ ತಿರುಗೇಟು
author img

By

Published : Sep 8, 2020, 1:58 PM IST

ಬೆಂಗಳೂರು: ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು. ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯ ಜೊತೆಗೆ ಅಂತರಂಗ-ಬಹಿರಂಗ ಸಖ್ಯ ಉಳ್ಳವರೇ ಆಗಿರುವುದರಿಂದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಸಾ. ರಾ. ಮಹೇಶ್ ತಿರುಗೇಟು ನೀಡಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್, ಡ್ರಗ್ಸ್ ಮಾಫಿಯಾ ಮಟ್ಟಹಾಕಲು ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಬಿಸಿ ಮುಟ್ಟಿಸಿದ್ದರಿಂದಲೇ ದೇಶಾಂತರ ಓಡಿಹೋಗಿ ತಲೆಮರೆಸಿಕೊಂಡಿದ್ದವರು ಜಾಮೀನು ಪಡೆದು ಬಂದಿದ್ದಾರೆ. ಇದಕ್ಕೆ ತೆರೆಮರೆಯಲ್ಲಿ ನಿಂತು ವ್ಯವಸ್ಥೆ ಮಾಡಿದವರು ಯಾರು ಎಂಬುದು ಗುಟ್ಟಾಗಿ ಉಳಿದಿಲ್ಲ ಎಂದು ಶಾಸಕ ಮಹೇಶ್​ ಕಿಡಿಕಾರಿದ್ದಾರೆ.

ಅಧಿಕಾರದ ಆಸೆಗಾಗಿ ಬಣ್ಣ ವೇಷ ಬದಲಿಸುವ ಜಾಯಮಾನ ಕೃಷಿ ಸಚಿವರಿಗೆ ಕರಗತವಾಗಿದೆ. ಊಸರವಳ್ಳಿಯನ್ನು ನಾಚಿಸುವಂತೆ ನಾಲಿಗೆಯ ಬಣ್ಣವನ್ನೂ ಬದಲಿಸುವ ಇಂತಹ ಬೃಹಸ್ಪತಿಗಳು ಕುಮಾರಸ್ವಾಮಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಲಿ ಎಂದು ಮಾಧ್ಯಮ ಹೇಳಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ... ಕುಮಾರಸ್ವಾಮಿ 'ಊಸರವಳ್ಳಿ'ಯಂತೆ ಬಣ್ಣ ಬದಲಾಯಿಸುತ್ತಿರುತ್ತಾರೆ: ಸಚಿವ ಬಿ ಸಿ ಪಾಟೀಲ್

ಪೂರ್ವಾಶ್ರಮದಲ್ಲಿ ಪೊಲೀಸ್ ಇಲಾಖೆಯಲ್ಲಿ ಇದ್ದ ಪಾಟೀಲರಿಗೆ ಇಂತಹ ಮಾಫಿಯಾಗಳ ಬಗ್ಗೆ ಅರಿವಿಲ್ಲ ಎಂದರೆ ಅವರು ಪಾಲಿಸಿದ ವೃತ್ತಿನಿಷ್ಠೆ ಏನೆಂಬುದು ನಗೆಪಾಟಲಿನ ಸಂಗತಿ. ಎಂತೆಂತಹ ಊಸರವಳ್ಳಿಗಳು ಪೊಲೀಸ್ ಇಲಾಖೆಯಲ್ಲಿ ಇದ್ದರು ಎಂಬ ಬಗ್ಗೆ ಮರುಕವಿದೆ ಎಂದು ಸಾ.ರಾ ಮಹೇಶ್ ಮಾತಿನ ಮೊನೆಯಲ್ಲಿ ಕುಟುಕಿದ್ದಾರೆ.

ಖಾವಿ ತೊಟ್ಟ ಮಾರ್ಜಾಲ ಸನ್ಯಾಸಿಯಂತೆ ಖಾಕಿ ಕಳಚಿ ಖಾದಿ ಧರಿಸಿದ ನಂತರ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಬೇಕಾಗಿಲ್ಲ ಎಂಬ ಉಡಾಫೆಯ ಪ್ರತಿಕ್ರಿಯೆ ನೀಡುತ್ತಿರುವ ಪಾಟೀಲರು ನಿಜವಾದ ಊಸರವಳ್ಳಿ ಎಂದು ಸಾ.ರಾ. ಮಹೇಶ್ ತಿರುಗೇಟು ನೀಡಿದ್ದಾರೆ. ರಾಜ್ಯದ ಕೃಷಿಕರು ಯೂರಿಯಾ ಸೇರಿದಂತೆ ರಸಗೊಬ್ಬರ ಕೊರತೆ ಎದುರಿಸುತ್ತಿರುವುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂಬುದನ್ನು ತಮ್ಮ ಹೇಳಿಕೆಯಲ್ಲಿ ಒಪ್ಪಿಕೊಂಡಿರುವ ಸಚಿವ ಪಾಟೀಲ ಅವರು ಎಷ್ಟು ಮಂದಿ ವಿರುದ್ಧ ಕೇಸು ಜಡಿದಿದ್ದಾರೆ? ಎಂಬ ವಿವರವನ್ನು ಜನತೆಯ ಮುಂದಿಡಲಿ ಎಂದು ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.