ಬೆಂಗಳೂರು: ಕಾರು ಅಪಘಾತದಲ್ಲಿ ಮಾಜಿ ಶಾಸಕ ಅನಿಲ್ ಲಾಡ್ಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ನಸುಕಿನ ಜಾವ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಸಂಜಯ ನಗರ ಮುಖ್ಯರಸ್ತೆಯಲ್ಲಿ ಅವಘಡ ಸಂಭವಿಸಿದ್ದು, ಗೆಳೆಯನ ಮನೆಗೆ ತೆರಳಿದ್ದ ಅನಿಲ್ ಲಾಡ್ ಹಾಗೂ ಅವರ ಪತ್ನಿ ಆರತಿ ವಾಪಸ್ಸಾಗುತ್ತಿದ್ದರು. ಆರತಿ ಕಾರು ಚಾಲನೆ ಮಾಡುತ್ತಿದ್ದು, ಸಿಗ್ನಲ್ನಲ್ಲಿ ತಿರುವು ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ.
ಇದನ್ನೂ ಓದಿ:ಎಣ್ಣೆ ವ್ಯಾಪಾರಿ ಬಳಿ ಹಣ ದೋಚಿ ಪರಾರಿಯಾಗಿದ್ದ ಗ್ಯಾಂಗ್ ಅರೆಸ್ಟ್
ನಿದ್ರೆಯ ಮಂಪರು ಹಿನ್ನೆಲೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಅನಿಲ್ ಲಾಡ್ಗೆ ಸಣ್ಣ ಪ್ರಮಾಣದಲ್ಲಿ ಗಾಯವಾಗಿದೆ. ಅಪಘಾತದ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ರಾಮಯ್ಯ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ಪಡೆದ ಅನಿಲ್ ಲಾಡ್, ಹೆಚ್ಚಿನ ಚಿಕಿತ್ಸೆ ಪಡೆಯಲು ವಿಕ್ರಮ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಆರ್.ಟಿ. ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.