ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಶಾಸಕ ಡಿ.ಎನ್.ಜೀವರಾಜ್ರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬಿಡಿಎ ಅಧ್ಯಕ್ಷ ಸ್ಥಾನ ನೀಡಿದ ಹಿನ್ನೆಲೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಶಾಸಕ ಎಸ್.ಆರ್.ವಿಶ್ವನಾಥ್ ರಾಜೀನಾಮೆ ಕೊಟ್ಟಿದ್ದರು. ಇದೀಗ ಶೃಂಗೇರಿ ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಪಾಲಕರಲ್ಲಿ ಸಚಿವ ಎಸ್.ಟಿ ಸೋಮಶೇಖರ್ ಮಾಡಿದ ಮನವಿ ಏನು?
2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿರುವ ಜೀವರಾಜ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತರಾಗಿರುವ ಕಾರಣ ಮತ್ತೆ ಅಧಿಕಾರ ನೀಡುವ ನಿರ್ಧಾರ ಮಾಡಿದ್ದಾರೆ.