ಮಂಡ್ಯ : ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ, ಕಾವೇರಿ ಹೋರಾಟಗಾರರಾದ ಜಿ.ಮಾದೇಗೌಡ (92) ವಿಧಿವಶರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಮೊದಲಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾದೇಗೌಡರನ್ನು ಕೆ ಎಂ ದೊಡ್ಡಿಯಲ್ಲಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಿ, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಚೇತರಿಸಿಕೊಳ್ಳುತ್ತಿದ್ದಾರೆಂದು ಆಸ್ಪತ್ರೆಯ ಜನರಲ್ ಫಿಜಿಷಿಯನ್ ಡಾ.ರಕ್ಷಿತ್ ಭಾರದ್ವಾಜ್ ತಿಳಿಸಿದ್ದರು.
ಇನ್ನು, ಮಾದೇಗೌಡರು ಜಿಲ್ಲೆಯ ಹಿರಿಯ ರಾಜಕಾರಣಿ, ರೈತ ಹೋರಾಟಗಾರರಾಗಿದ್ದರು. ಕಾವೇರಿ ಹೋರಾಟದ ಚಳವಳಿಯಲ್ಲಿ ಮುಂಚೂಣಿ ನಾಯಕರಾಗಿದ್ದರು. ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಮೂರು ಬಾರಿ ಶಾಸಕರಾಗಿದ್ದರು. ನಂತರ 1989 ಹಾಗೂ 1991ರಲ್ಲಿ ಎರಡು ಬಾರಿ ಲೋಕಸಭೆಗೆ ಸ್ಪರ್ಧಿಸಿ, ಅಲ್ಲಿಯೂ ಜಯಗಳಿಸಿ ಸೋಲಿಲ್ಲದ ಸರದಾರರಾಗಿ ಗುರುತಿಸಿಕೊಂಡಿದ್ದರು.
ಇದನ್ನೂ ಓದಿ: ರಾಜ್ಯ ಸರ್ಕಾರದ ಅಸ್ಥಿರತೆಯಿಂದ ಆಡಳಿತದ ಮೇಲೆ ದುಷ್ಪರಿಣಾಮ : ಮಲ್ಲಿಕಾರ್ಜುನ ಖರ್ಗೆ