ಬೆಂಗಳೂರು: ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ ಜಯಚಂದ್ರ ರೆಡ್ಡಿ (90) ಶನಿವಾರ ನಿಧನರಾಗಿದ್ದಾರೆ.
ಜಯಚಂದ್ರ ರೆಡ್ಡಿ ಅವರ ಮಗಳು ಹಾಗೂ ಅಳಿಯ ಅಮೆರಿಕದಲ್ಲಿ ವಾಸವಾಗಿದ್ದು, ಅವರು ಬಂದನಂತರ ಅಂತ್ಯಕ್ರಿಯೆಯನ್ನು ಮಂಗಳವಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಬೆಂಗಳೂರಿನ ವೈಟ್‌ಫೀಲ್ಡ್, ಪೋರ್ಟ್ ಟವರ್ಸ್ ಮತ್ತು ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನ ನಡೆಯಲಿದೆ. ಬಳಿಕ ಪಣತೂರ್ ಶವಸಂಸ್ಕಾರ ಕೇಂದ್ರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
1929 ರ ಜುಲೈ 15 ರಲ್ಲಿ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಜನಿಸಿದ್ದ ಜಯಚಂದ್ರ ರೆಡ್ಡಿ, ಮದ್ರಾಸ್‌ನ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದು, 1952ರಲ್ಲಿ ಮದ್ರಾಸ್ ಹೈಕೋರ್ಟ್‌ನ ವಕೀಲರಾಗಿ ತಮ್ಮ ವೃತ್ತಿ ಆರಂಭಿಸಿದ್ದರು. ಬಳಿಕ 1966 ರಲ್ಲಿ ಮದ್ರಾಸ್ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ನೇಮಕಗೊಂಡರು. 1970 ರಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗೆ ಬಡ್ತಿ ಪಡೆದು, 1975 ರಲ್ಲಿ ಆಂಧ್ರ ಪ್ರದೇಶದ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕವಾದರು. 1976 ರಲ್ಲಿ ಖಾಯಂ ನ್ಯಾಯಮೂರ್ತಿಗಳು
1990 ರಿಂದ 1994, ಜುಲೈ 14ರ ವರೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾದರು. ಬಳಿಕ ಜುಲೈ 1995 ರಿಂದ ರಾಷ್ಟ್ರೀಯ ಕಾನೂನು ಆಯೋಗದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.