ETV Bharat / city

ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡಲು ತಕ್ಷಣವೇ ಕಾರ್ಯಪ್ರವೃತ್ತರಾಗಿ: ಸಿಎಂಗೆ ಎಂ.ಬಿ. ಪಾಟೀಲ ಮನವಿ - ಬೆಂಗಳೂರು ಲೇಟೆಸ್ಟ್​ ನ್ಯೂಸ್​

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪನವರು ಕೃಷ್ಣಾ ನೀರಿನ ಮರುಹಂಚಿಕೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸರ್ವಪಕ್ಷ ಸಭೆ ಕರೆದು ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರವಾಗಿ ಮನವರಿಕೆ ಮಾಡುವುದರ ಜೊತೆಗೆ ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡಲು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಮನವಿ ಮಾಡಿದ್ದಾರೆ.

Former Water Resources Minister M.B. Patil appeal to cm  Yeddyurappa
ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡಲು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು: ಸಿಎಂಗೆ ಎಂ.ಬಿ.ಪಾಟೀಲ್ ಮನವಿ
author img

By

Published : Oct 8, 2020, 7:04 PM IST

ಬೆಂಗಳೂರು: ಕೃಷ್ಣಾ ನೀರಿನ ಮರುಹಂಚಿಕೆ ಕುರಿತು ಹೊಸ ನ್ಯಾಯಾಧಿಕರಣ ರಚನೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಆಂಧ್ರ, ತೆಲಂಗಾಣದ ಮುಖ್ಯಮಂತ್ರಿಗಳ ನಡುವಿನ ಸಭೆಯ ವರದಿಗಳು ಇಂದು ಮಾಧ್ಯಮದಲ್ಲಿ ಪ್ರಕಟವಾಗಿರುವುದನ್ನು ಗಮನಿಸಿದ್ದೇನೆ. ಮಾಧ್ಯಮಗಳ ವರದಿಯಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್​ರವರ ಹೇಳಿಕೆ ಗೊಂದಲಮಯವಾಗಿದೆ ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ.

Former Water Resources Minister M.B. Patil appeal to cm  Yeddyurappa
ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡಲು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು: ಸಿಎಂಗೆ ಎಂ.ಬಿ.ಪಾಟೀಲ್ ಮನವಿ

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಕೃಷ್ಣಾ ನ್ಯಾಯಾಧಿಕರಣ ತೀರ್ಪಿನ ಕುರಿತು ನಮಗೆ ಅನ್ಯಾಯವಾಗಿದೆ ಎಂದು ರಾಜ್ಯಗಳ ವಿಭಜನೆಯ ನಂತರ ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳು ಪರಸ್ಪರ ಸುಪ್ರೀಂ ಕೋರ್ಟ್​ನಲ್ಲಿ ದಾವೆ ಹೂಡಿವೆ. ನ್ಯಾಯಾಧಿಕರಣ ಈಗಾಗಲೇ ನಿರ್ಣಯಿಸಿದಂತೆ ಇದು ಆ ಎರಡೂ ರಾಜ್ಯಗಳ ನಡುವಿನ ಆಂತರಿಕ ವ್ಯಾಜ್ಯವಾಗಿದೆ.

ರಾಜ್ಯ ಪುನರ್ ವಿಂಗಡನೆ ಕಾಯ್ದೆ ಸೆಕ್ಷನ್​ 80ರ ಪ್ರಕಾರ ಎಂದು ಈಗಾಗಲೇ ಬ್ರಿಜೇಶ್​ ಕುಮಾರ್​ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ತೀರ್ಪು ನೀಡಿದೆ ಮತ್ತು ಸುಪ್ರೀಂಕೋರ್ಟ್​ನಲ್ಲಿ ಕೇಂದ್ರ ಸರ್ಕಾರವು ಕೂಡ ಇದೇ ನಿಲುವನ್ನು ಅಫಿಡವಿಟ್ ಮೂಲಕ ಸಲ್ಲಿಸಿದೆ. ಆದ್ದರಿಂದ ಕೃಷ್ಣಾ ನ್ಯಾಯಾಧಿಕರಣ ತೀರ್ಪಿನ ನೀರಿನ ಮರುಹಂಚಿಕೆ ಆ ಎರಡು ರಾಜ್ಯಗಳಿಗೆ ಸೀಮಿತವಾಗಿದೆ ಹೊರತು ಕರ್ನಾಟಕಕ್ಕೆ ಅಲ್ಲ. ಆದರೆ, ಈ ಹಂತದಲ್ಲಿ ಕೇಂದ್ರದ ಮಂತ್ರಿಗಳು ಹಾಗೂ ಆಂಧ್ರ, ತೆಲಂಗಾಣದ ಮುಖ್ಯಮಂತ್ರಿಗಳ ಸಭೆ ಕರ್ನಾಟಕ ಹಿತಾಸಕ್ತಿಗೆ ಧಕ್ಕೆಯಾಗುವ ಅನುಮಾನಕ್ಕೆ ಎಡೆಮಾಡಿದೆ.

ಮುಖ್ಯಮಂತ್ರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸರ್ವಪಕ್ಷ ಸಭೆ ಕರೆದು ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರವಾಗಿ ಮನವರಿಕೆ ಮಾಡುವುದರ ಜೊತೆಗೆ ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡಲು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು. ಕರ್ನಾಟಕದ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.