ಬೆಂಗಳೂರು : ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿಸೂರ್ಯ ಹಾಗೂ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಮಾರ್ಗದರ್ಶನದಲ್ಲಿ ನಿತ್ಯ ನಿರಂತರ ಸೇವಾ ಟ್ರಸ್ಟ್ ವತಿಯಿಂದ ಕೊರೊನಾ ಸೇವೆಗಳಿಗಾಗಿ ಉಚಿತ 5 ಆ್ಯಂಬುಲೆನ್ಸ್ಗಳ ಸೇವೆಗೆ ಶ್ರೀನಗರ ಬಸ್ ನಿಲ್ದಾಣದ ಬಳಿ ಚಾಲನೆ ನೀಡಲಾಯಿತು.
ನಿತ್ಯ ನಿರಂತರ ಸೇವಾ ಟ್ರಸ್ಟ್ ಬಸವನಗುಡಿ ನಾಗರಿಕರ ಅನುಕೂಲಕ್ಕಾಗಿ ನೀಡಿರುವ ಈ ಸೇವೆ ಅಡಿಯಲ್ಲಿ ಉಚಿತ ಆ್ಯಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದ್ದು, ಕೋವಿಡ್ -19 ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಶಾಸಕ ರವಿ ಸುಬ್ರಹ್ಮಣ್ಯ ತಿಳಿಸಿದರು.
ಈ ಸಂದರ್ಭದಲ್ಲಿ ನಿತ್ಯ ನಿರಂತರ ಸೇವಾ ಟ್ರಸ್ಟ್ನ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.