ETV Bharat / city

ಶಿವಾನಂದ ವೃತ್ತದ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲಾಗುವುದು: ಗೌರವ್ ಗುಪ್ತಾ - ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯೋಜನಾ ವಿಭಾಗ

ಶಿವಾನಂದ ವೃತ್ತದ ಬಳಿ ಕೈಗೆತ್ತಿಕೊಂಡಿರುವ ಮೇಲುಸೇತುವೆ ಕಾಮಗಾರಿಯ ಸ್ಥಳದಲ್ಲಿ ಇರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗಿದ್ದು, ಬಾಕಿಯಿರುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

Gaurav Gupta
ಗೌರವ್ ಗುಪ್ತಾ
author img

By

Published : Jun 13, 2021, 7:08 AM IST

ಬೆಂಗಳೂರು: ನಗರದಾದ್ಯಂತ ಗುಂಡಿ ಅಗೆದು ರಸ್ತೆ ಮುಚ್ಚಿರುವ ವರದಿಗಳ ಬೆನ್ನಲ್ಲೇ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆಗೆ ಸಿಟಿ ರೌಂಡ್ಸ್ ಪ್ರಾರಂಭಿಸಿದ್ದಾರೆ.

ಅನ್​ಲಾಕ್ ನಂತರ ನಗರದಲ್ಲಿ ಸಂಚಾರ ದಟ್ಟಣೆ ಸಾಕಷ್ಟು ಆಗುವ ಸಂಭವದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿಬಂದಿವೆ. ರಾತ್ರಿ ಕೂಡ ಕೆಲ ಕಾಮಗಾರಿಗಳ ವೀಕ್ಷಣೆಗೆ ತೆರಳಿದ್ದ ಅವರು, ಶಿವಾನಂದ ವೃತ್ತದ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ಬಿಬಿಎಂಪಿ ಆಯುಕ್ತ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯೋಜನಾ ವಿಭಾಗದ ಕೈಗೆತ್ತಿಕೊಂಡಿರುವ ಶಿವಾನಂದ ವೃತ್ತ ಮೇಲುಸೇತುವೆ ಕಾಮಗಾರಿಯನ್ನು ಗೌರವ್ ಗುಪ್ತಾ ತಪಾಸಣೆ ನಡೆಸಿದರು. ಈ ವೇಳೆ ಜಂಟಿ ಆಯುಕ್ತರುಗಳಾದ ಪಲ್ಲವಿ, ಸರ್ಫರಾಜ್ ಖಾನ್, ಪ್ರಧಾನ ಅಭಿಯಂತರರಾದ ಪ್ರಭಾಕರ್, ಯೋಜನಾ ವಿಭಾಗದ ಮುಖ್ಯ ಅಭಿಯಂತರ ಲೋಕೇಶ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿವಾನಂದ ವೃತ್ತದ ಬಳಿ ಕೈಗೆತ್ತಿಕೊಂಡಿರುವ ಮೇಲುಸೇತುವೆ ಕಾಮಗಾರಿಯ ಸ್ಥಳದಲ್ಲಿ ಇರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗಿದ್ದು, ಬಾಕಿಯಿರುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಮಾಧ್ಯಮಗಳಿಗೆ ತಿಳಿಸಿದರು. ಶಿವಾನಂದ ವೃತ್ತದ ಬಳಿ 493 ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಮೇಲ್ಸೇತುವೆಗೆ 16 ಪಿಲ್ಲರ್​ಗಳು ಬರಲಿದ್ದು, ಅದರಲ್ಲಿ ಈಗಾಗಲೇ 15 ಪಿಲ್ಲರ್​ಗಳ ಕಾಮಗಾರಿ ಪೂರ್ಣಗೊಂಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗ ಜಲಮಂಡಳಿಯಿಂದ 450 ಎಂಎಂನ ನೀರಿನ ಪೈಪ್ ಲೈನ್ ಈಗಾಗಲೇ ಬೇರೆಡೆ ಸ್ಥಳಾಂತರಿಸಿದ್ದು, ಅದರಡಿ 700 ಎಂಎಂನ ನೀರಿನ ಪೈಪ್ ಲೈನ್ ಇದ್ದ ಪರಿಣಾಮ ಪಿಲ್ಲರ್ ಕಾಮಗಾರಿ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಪೈಪ್‌ಲೈನ್ ಬದಲಿಸಿದ್ದು, ಪಿಲ್ಲರ್ ಕಾಮಗಾರಿ ಪ್ರಗತಿಯಲ್ಲಿದೆ. ಬಾಕಿಯಿರುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಈ ಸಂಬಂಧ ದಿನ ನಿತ್ಯದಲ್ಲಿ ಕಾಮಗಾರಿಯ ಮೇಲುಸ್ತುವಾರಿ ವಹಿಸಿ, ಆ ಒಂದೆರಡು ದಿನದಲ್ಲಿ ನಿರ್ದಿಷ್ಟ ಗುರಿಯನ್ನು ನಿಗದಿಪಡಿಸಿಕೊಂಡು ತ್ವರಿತವಾಗಿ ಯಾವ ಕೆಲಸ ಆಗಬೇಕು ಅದನ್ನು ಮಾಡಿ ಮುಗಿಸಲು ಸೂಚಿಸಿ, ನಿರ್ದಿಷ್ಟ ಹಾಗೂ ತ್ವರಿತ ಅವಧಿಯೊಳಗೆ ಯೋಜನೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸರ್ವೀಸ್ ರಸ್ತೆ ತೆರವಿಗೆ ಸೂಚನೆ:

ಮೇಲ್ಸೇತುವೆಯ ಎರಡೂ ಕಡೆ ರಸ್ತೆ ದುರಸ್ತಿಪಡಿಸಬೇಕಿದೆ. ರಸ್ತೆ ದುರಸ್ತಿ ಮಾಡಿದ ನಂತರ ಜನರಿಗೆ ಯಾವುದೇ ಸಮಸ್ಯೆ ಆಗದಂತೆ ಮುಚ್ಚಿರುವ ರಸ್ತೆಗಳನ್ನು ಹಂತ ಹಂತವಾಗಿ ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಈ ಭಾಗದಲ್ಲಿ ಸಂಚಾರ ದಟ್ಟಣೆಯಾಗದಂತೆ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಮೇಲ್ಸೇತುವೆ ಅಡಿಯಲ್ಲಿ ಕಾಮಗಾರಿ ಮುಗಿದಿರುವ ಸ್ಥಳದಲ್ಲಿ ಸರ್ವೀಸ್ ರಸ್ತೆಯನ್ನು ಸಾರ್ವಜನಿಕರ ಸಂಪರ್ಕಕ್ಕೆ ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಶಾಲಾ ಶುಲ್ಕ ಸಂಬಂಧ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಲಿ: ಕ್ಯಾಮ್ಸ್ ಕಾರ್ಯದರ್ಶಿ ಆಗ್ರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.