ನೆಲಮಂಗಲ: ತನ್ನ ಹಿರಿಯ ಸಹೋದರಿ ಹಾಗೂ ತನಗೆ ಮದುವೆಯಾಗಿಲ್ಲವೆಂದು ಮನನೊಂದ ಯುವತಿ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಗ್ರಾಮದಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಚಂದನಾ ( 24) ಆತ್ಮಹತ್ಯೆಗೆ ಶರಣಾದವರು.
ಚಂದನಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಗಿ ಹೇಳಲಾಗಿದೆ. 'ನನ್ನ ಸಾವಿಗೆ ಯಾರೂ ಕಾರಣರಲ್ಲ' ಎಂದು ಡೆತ್‌ನೋಟ್ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಉಕ್ರೇನ್ನಲ್ಲಿ ಕರ್ನಾಟಕದ 281 ಎಂಬಿಬಿಎಸ್ ವಿದ್ಯಾರ್ಥಿಗಳು: ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ರವಾನೆ