ಬೆಂಗಳೂರು: ಗುಡ್ ಫ್ರೈಡೆ ಅಂಗವಾಗಿ ಶುಕ್ರವಾರ ನಗರದ ವಿವಿಧ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಕ್ರೈಸ್ತ ಅನುಯಾಯಿಗಳು ನಗರದ ಹಲವು ಚರ್ಚ್‌ಗಳಲ್ಲಿ ಮೇಣದ ಬತ್ತಿ ಹಿಡಿದು ಪ್ರಾರ್ಥನೆ ಸಲ್ಲಿಸಿದರು.
ಕಾರ್ಪೊರೇಷನ್ ಸರ್ಕಲ್ನಲ್ಲಿರುವ ಚರ್ಚ್‌ನಲ್ಲಿ ಫಾದರ್ಗಳು ಮುಂಜಾನೆಯಿಂದಲೇ ಶಿಲುಬೆಗೇರಿದ ಯೇಸು ಕ್ರಿಸ್ತನು ಆಡಿದ ಮಹತ್ವದ ಏಳು ಮಾತುಗಳ ಕುರಿತು ಪ್ರವಚನ ನೀಡಲಾಯಿತು. ಯೇಸು ಕ್ರಿಸ್ತ ಬಂಧನಕ್ಕೆ ಒಳಗಾಗುವುದರಿಂದ ಹಿಡಿದು ಶಿಲುಬೆಗೆ ಏರುವವರೆಗಿನ ಘಟನೆಗಳನ್ನು ಅವಲೋಕಿಸುತ್ತಾ ಪ್ರಾರ್ಥಿಸುವ ಮೂಲಕ ಶುಭ ಶುಕ್ರವಾರದ ಆರಾಧನೆ ನಡೆಯಿತು.