ETV Bharat / city

ಹೊಸ ತಾಲೂಕು ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿದ ರಾಜ್ಯ ಸರ್ಕಾರ - ತಾಲೂಕು ಪಂಚಾಯತಿ ಆಡಳಿತಾಧಿಕಾರಿ ನೇಮಕ

ಹೊಸದಾಗಿ ರಾಜ್ಯದಲ್ಲಿ ರಚನೆಯಾಗಿರುವ ತಾಲೂಕು ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ರಾಜ್ಯ ಸರ್ಕಾರ
ರಾಜ್ಯ ಸರ್ಕಾರ
author img

By

Published : May 22, 2020, 5:22 PM IST

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ತಾಲೂಕು ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ‌.

ರಾಜ್ಯ ಸರ್ಕಾರದ ಆದೇಶ ಪ್ರತಿ
ರಾಜ್ಯ ಸರ್ಕಾರದ ಆದೇಶ ಪ್ರತಿ

ಈ ಸಂಬಂಧ ರಾಜ್ಯಪತ್ರ ಪ್ರಕಟಿಸಿ ಆದೇಶ ಹೊರಡಿಸಲಾಗಿದೆ. ಜೊತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಾಲೂಕುಗಳ ಜಿಲ್ಲಾ ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇಗುಡ್ಡ, ರಬಕವಿ-ಬನಹಟ್ಟಿ, ಇಳಕಲ್ ತಾಲೂಕುಗಳಿಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕು ಪಂಚಾಯಿತಿಗೆ ಜಿಲ್ಲಾ ಪಂಚಾಯತಿ‌ ಉಪ ಕಾರ್ಯದರ್ಶಿ ಹಾಗೂ ಕಾಗವಾಡ, ಮೂಡಲಗಿಗೆ, ಉಪ ಕಾರ್ಯದರ್ಶಿಯನ್ನು ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರದ ಆದೇಶ ಪ್ರತಿ
ರಾಜ್ಯ ಸರ್ಕಾರದ ಆದೇಶ ಪ್ರತಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಪಂಚಾಯಿತಿಗೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅವರನ್ನು, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಪಂಚಾಯಿತಿಗೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅವರನ್ನು ನೇಮಕ ಮಾಡಲಾಗಿದೆ. ಬೀದರ್ ಜಿಲ್ಲೆಯ ಚಿಟ್ಟಗುಪ್ಪ, ಹುಲಸೂರು, ಕಮಲನಗರ, ಬಳ್ಳಾರಿ ಜಿಲ್ಲೆಯ ಕುರುಗೋಡು, ಕೊಟ್ಟೂರು, ಕಂಪ್ಲಿ ತಾಲೂಕು ಪಂಚಾಯಿತಿಗಳಿಗೆ ಉಪ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ‌. ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಅಳ್ನಾವರ, ಗದಗ ಜಿಲ್ಲೆಯ ಗಜೇಂದ್ರ ಗಡ, ಲಕ್ಷ್ಮೇಶ್ವರ, ಕಲಬುರಗಿ ಜಿಲ್ಲೆಯ ಕಾಳಗಿ, ಕಮಲಾಪುರ, ಯಾಡ್ರಮಿ, ಶಹಬಾದ್ ತಾಲೂಕುಗಳಿಗೆ ಜಿಲ್ಲಾ ಉಪ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಹಣಸಗಿ, ವಡಗೇರಾ, ಗುರುಮಟಕಲ್ ತಾಲೂಕು ಪಂಚಾಯಿತಿಗಳಿಗೆ ಉಪ ಕಾರ್ಯದರ್ಶಿಯನ್ನು ನೇಮಕ ಮಾಡಲಾಗಿದೆ.

ಕೊಪ್ಪಳ ಜಿಲ್ಲೆಯ ಕುಕುನೂರು, ಕನಕಗಿರಿ, ಕಾರಟಗಿ, ರಾಯಚೂರು ಜಿಲ್ಲೆಯ ಮಸ್ಕಿ, ಸಿರವಾರ, ಉಡುಪಿ ಜಿಲ್ಲೆಯ ಬ್ರಹ್ಮಾವರ, ಕಾಪು, ಬೈಂದೂರು, ಹೆಬ್ರಿ, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ, ಕಡಬ ತಾಲೂಕು ಪಂಚಾಯಿತಿಗಳಿಗೆ ಆಯಾ ಜಿಲ್ಲೆಯ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಬೆಂಗಳೂರಿನ ಯಲಹಂಕ ತಾಲೂಕು ಪಂಚಾಯಿತಿ, ವಿಜಯಪುರ ಜಿಲ್ಲೆಯ ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರಹಿಪ್ಪರಗಿ, ತಾಳಿಕೋಟಿ, ಚಡಚಣ, ಕೊಲ್ಹಾರ್ ತಾಲೂಕು ಪಂಚಾಯಿತಿಗಳು ಹಾಗೂ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಪಂಚಾಯಿತಿಗೆ ಜಿಲ್ಲೆಯ ಜಿಲ್ಲಾ ಪಂಚಾಯತಿ ಕಾರ್ಯದರ್ಶಿ ಅವರನ್ನು ನೇಮಕ ಮಾಡಲಾಗಿದೆ.

ಮೈಸೂರು ಜಿಲ್ಲೆಯ ಸರಗೂರು ತಾಲೂಕು ಪಂಚಾಯಿತಿ, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಪಂಚಾಯಿತಿ, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕು ಪಂಚಾಯಿತಿ, ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕು ಪಂಚಾಯಿತಿಗೆ ಈ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.