ETV Bharat / city

ಕಟ್ಟಡ ಕಾರ್ಮಿಕರಿಗೆ ಸುಪ್ರೀಂ ನಿರ್ದೇಶನದಂತೆ ನೆರವು: ಹೈಕೋರ್ಟ್​​​​ಗೆ ಮಾಹಿತಿ ನೀಡಿದ ಸರ್ಕಾರ - ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಮೇಶ್ ಬಾಬು

ಲಾಕ್​ಡೌನ್​​ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರ ನೋಂದಣಿ, ಕಲ್ಯಾಣ ನಿಧಿ ಸಂಗ್ರಹದಿಂದ ನೆರವು ನೀಡಲಾಗಿದೆ ಎಂದು ಹೈಕೋರ್ಟ್​​​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

High Court
ಹೈಕೋರ್ಟ್
author img

By

Published : Jun 15, 2020, 6:09 PM IST

Updated : Jun 15, 2020, 6:16 PM IST

ಬೆಂಗಳೂರು: ಲಾಕ್​​​​ಡೌನ್​​​​ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಕಟ್ಟಡ ಕಾರ್ಮಿಕರಿಗೆ ಸುಪ್ರಿಂಕೋರ್ಟ್ 2018ರಲ್ಲಿ ನೀಡಿರುವ ತೀರ್ಪಿನ ಅನ್ವಯವೇ ಕ್ರಮ ಕೈಗೊಂಡು ನೆರವು ನೀಡಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​​​ಗೆ ಮಾಹಿತಿ ನೀಡಿದೆ.

ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ 'ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿ'ಯಿಂದ ತಲಾ ₹ 10 ಸಾವಿರ ಪರಿಹಾರ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ವಿಧಾನ ಪರಿಷತ್​​ ಮಾಜಿ ಸದಸ್ಯ ರಮೇಶ್ ಬಾಬು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಈ ಮಾಹಿತಿ ನೀಡಿದೆ.

ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ವಕೀಲರು ಮಾಹಿತಿ ನೀಡಿ, ಕಟ್ಟಡ ಕಾರ್ಮಿಕರ ನೋಂದಣಿ, ಕಲ್ಯಾಣ ನಿಧಿ ಸಂಗ್ರಹ ಹಾಗೂ ಅದರ ಸಾಮಾಜಿಕ ಲೆಕ್ಕಪರಿಶೋಧನೆಗೆ ಸಂಬಂಧಿಸಿದಂತೆ 2018ರಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ತೀರ್ಪಿನ ಅನ್ವಯವೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿ ಮೆಮೋ ಪ್ರತಿಯನ್ನು ಪೀಠಕ್ಕೆ ಸಲ್ಲಿಸಿದರು.

ಮೆಮೋ ಹಾಗೂ ಸುಪ್ರೀಂಕೋರ್ಟ್ ತೀರ್ಪು ಪಾಲಿಸಿರುವ ಬಗ್ಗೆ ಸಲ್ಲಿಸಲಾಗಿರುವ ಪೂರಕ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಿದ ಪೀಠ, ಈ ಪ್ರತಿಗಳನ್ನು ಅರ್ಜಿದಾರರಿಗೂ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.

Last Updated : Jun 15, 2020, 6:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.