ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ಎರಡನೇ ಅಲೆ ಎದುರಿಸಲು ಸೂಕ್ತ ಸಿದ್ಧತೆ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಟೀಕಿಸಿದ್ದಾರೆ.
ರಾಜ್ಯಪಾಲ ವಜುಭಾಯಿ ವಾಲಾ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ, ಸೋಂಕು ಹರಡುವುದನ್ನು ತಡೆಗಟ್ಟಬಹುದಿತ್ತು. ಲಾಕ್ಡೌನ್ ಮಾಡಿ ಸರ್ಕಾರ ತಪ್ಪು ಮಾಡಿತ್ತು. ಈ ಸಂದರ್ಭದಲ್ಲಿ ಲಕ್ಷಾಂತರ ಜನರಿಗೆ ಸೌಲಭ್ಯ ನೀಡದೇ ವಂಚಿಸಲಾಗಿದೆ. ತಜ್ಞರು ನೀಡಿರುವ ವರದಿ ಆಧಾರದಲ್ಲಿ ಮುಂಬರುವ ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ಲಾಕ್ಡೌನ್ ಮಾಡಿದ್ರೆ ಆರೂವರೆ ಕೋಟಿ ಜನರಿಗೆ ಕನಿಷ್ಟ ಸವಲತ್ತುಗಳನ್ನು ಕಲ್ಪಿಸಬೇಕು. ತಪ್ಪು ಮಾಡಿ ಜೈಲು ಸೇರಿದ ಖೈದಿಗೆ ಊಟ, ವಸತಿ, ಉದ್ಯೋಗ, ಸಂಬಳ ನೀಡಲಾಗುತ್ತೆ. ಆದ್ರೆ, ಯಾವುದೇ ತಪ್ಪು ಮಾಡದ ಜನರಿಗೆ ಲಾಕ್ಡೌನ್ ಅಂದರೆ ಗೃಹಬಂಧನ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಇಂದಿನಿಂದ ಕಠಿಣ ನಿಯಮ ಜಾರಿ; ಯಾವುದಕ್ಕೆ ಅವಕಾಶ, ಯಾವುದಕ್ಕೆ ನಿರ್ಬಂಧ?