ಬೆಂಗಳೂರು: ವಿಧಾನಪರಿಷತ್ ಚುನಾವಣೆ ಘೋಷಣೆಯಾದ ಹಿನ್ನೆಲೆ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಇದೇ 11 ರಂದು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿದ್ದ ''ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮ''ವನ್ನು ಮುಂದೂಡಲಾಗಿದೆ.
ಚುನಾವಣಾ ಆಯೋಗದ ನಿದೇರ್ಶನದ ಪ್ರಕಾರ ನೀತಿ ಸಂಹಿತೆ ಜಾರಿಯಲಿದ್ದಾಗ ಯಾವುದೇ ರೀತಿಯ ಸರ್ಕಾರಿ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂಬ ನಿಯಮವಿದೆ. ಹೀಗಾಗಿ ಇದೇ 11 ರಂದು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿದ್ದ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಸದ್ಯದಲ್ಲೇ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಬಗ್ಗೆ ಮಾತನಾಡುವ ನೈತಿಕತೆ ಛಲವಾದಿ ನಾರಾಯಣಸ್ವಾಮಿಗೆ ಇಲ್ಲ: ಪುಷ್ಪಾ ಅಮರನಾಥ್
ಇದೇ ತಿಂಗಳ 11 ರಂದು ಕಲಬುರಗಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಉದ್ಯಮಿಯಾಗಿ ಉದ್ಯೋಗ ನೀಡು ಮತ್ತು ಕೈಗಾರಿಕೆ ಅದಾಲತ್ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಾಗಾರ ನಡೆಯುವ ವೇದಿಕೆಗೆ "ಪುನೀತ್ ರಾಜ್ ಕುಮಾರ್" ಎಂದು ಹೆಸರಿಟ್ಟು ಆಗಲಿದ ಮೇರು ನಟನಿಗೆ ಗೌರವ ಸಮರ್ಪಿಸಲು ಸಚಿವ ನಿರಾಣಿ ಅವರು ಮುಂದಾಗಿದ್ದರು.