ಬೆಂಗಳೂರು: ನಗರದ ಕಾಚರಕನಹಳ್ಳಿ (ಸಂಡೆ ಬಜಾರ್) ಕೊಳಗೇರಿ ಪ್ರದೇಶದಲ್ಲಿ ವಾಸ ಮಾಡುತ್ತಿದ್ದ ವಲಸೆ ಕಾರ್ಮಿಕರ ಗುಡಿಸಲುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪ್ರಕರಣದಲ್ಲಿ ನಿರ್ವಸಿತರಾಗಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಸದ್ಯದಲ್ಲೇ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಸಂಡೆ ಬಜಾರ್ ಸಮೀಪದ ಗುಡಿಸಲುಗಳಲ್ಲಿ ವಾಸವಿದ್ದ ಕಲಬುರಗಿ ಮೂಲದ ಕಾರ್ಮಿಕರು ಲಾಕ್ಡೌನ್ ಸಂದರ್ಭದಲ್ಲಿ ಸ್ವಗ್ರಾಮಗಳಿಗೆ ತೆರಳಿದ್ದಾಗ ದುಷ್ಕರ್ಮಿಗಳು ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ನೂರಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಹೋಗಿದ್ದವು. ಈ ಸಂಬಂಧ ವಕೀಲೆ ವೈಶಾಲಿ ಹೆಗಡೆ ಬರೆದ ಪತ್ರವನ್ನು ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಎಎಸ್ ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿ, ಗುಡಿಸಲುಗಳು ಸುಟ್ಟುಹೋದ ಜಾಗದಲ್ಲೇ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರ ಆಲೋಚಿಸುತ್ತಿದೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಸದ್ಯದಲ್ಲೇ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಸರ್ಕಾರದ ಪರ ವಕೀಲರ ವಾದ ದಾಖಲಿಸಿಕೊಂಡ ಪೀಠ ವಿಚಾರಣೆ ಮುಂದೂಡಿತು.
ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಪ್ರಕರಣ: ಪುನರ್ವಸತಿ ಭರವಸೆ ನೀಡಿದ ಸರ್ಕಾರ - ಬೆಂಗಳೂರು ಸುದ್ದಿ
ಸಂಡೆ ಬಜಾರ್ ಕೊಳಗೇರಿ ಪ್ರದೇಶದಲ್ಲಿ ವಾಸಮಾಡುತ್ತಿದ್ದ ವಲಸೆ ಕಾರ್ಮಿಕರ ಗುಡಿಸಲುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪ್ರಕರಣದಲ್ಲಿ ನಿರ್ವಸಿತರಾಗಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಸದ್ಯದಲ್ಲೇ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.