ETV Bharat / city

ಅಸ್ಪೃಶ್ಯತೆ ನಿವಾರಣೆಗೆ ಸರ್ಕಾರ ಸಜ್ಜು: ಸಚಿವ ಕೋಟ - koppala untouchability issue

ವಿನಯ ಸಾಮರಸ್ಯ ಯೋಜನೆಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಈ ಮೂಲಕ ಅಸ್ಪೃಶ್ಯತೆ ನಿವಾರಣೆಗೆ ಸರ್ಕಾರ ಸಜ್ಜಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

minister Kota Shrinivas Poojary
ಸಚಿವ ಕೋಟ ಶ್ರೀನಿವಾಸ ಪೂಜಾರಿ
author img

By

Published : Apr 14, 2022, 5:45 PM IST

ಬೆಂಗಳೂರು: ರಾಜ್ಯದ ಅಸ್ಪೃಶ್ಯತೆ ಮುಕ್ತ ಗ್ರಾಮ ಪಂಚಾಯಿತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿಶೇಷ ಅನುದಾನ ನೀಡುವ ಕುರಿತು ಪರಿಶೀಲಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಿನಯ ಸಾಮರಸ್ಯ ಯೋಜನೆಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ ಎಂದರು.

ಕೊಪ್ಪಳ ಜಿಲ್ಲೆಯಲ್ಲಿ 2 ವರ್ಷದ ಮಗು ದೇವಸ್ಥಾನಕ್ಕೆ ತೆರಳಿದ್ದಾಗ 25 ಸಾವಿರ ದಂಡ ವಿಧಿಸಿದ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಆಗಿತ್ತು. ಆ ಮಗುವನ್ನು ದತ್ತು ಪಡೆದು ಮಗುವಿನ ಎಲ್ಲ ಶಿಕ್ಷಣದ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸಲಾಗುವುದು. ಜೊತೆಗೆ ಆ ಮಗು ವಿನಯನ ಹೆಸರಿನಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಇಡೀ ರಾಜ್ಯದಲ್ಲಿ ಜನಜಾಗೃತಿ ಮೂಡಿಸಲಾಗುವುದು ಎಂದರು.

ಕರ್ನಾಟಕದಲ್ಲಿ ಅಂಬೇಡ್ಕರರು ಭೇಟಿ ಕೊಟ್ಟ ಸ್ಥಳಗಳ ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ನೆನೆಗುದಿಗೆ ಬಿದ್ದಿದ್ದ ಅಂಬೇಡ್ಕರ್ ಸ್ಫೂರ್ತಿ ಭವನ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ವಿಶೇಷ ಮುತುವರ್ಜಿವಹಿಸಿ ಕಡತಗಳ ವಿಲೇವಾರಿ ಮಾಡಿದ್ದು, ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ. 50 ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಿದ್ದಾರೆ ಎಂದರು. ಅಲ್ಲದೇ ಅರ್ಹ ಸಾಧಕರನ್ನು ಅತ್ಯಂತ ಪಾರದರ್ಶಕವಾಗಿ ಆಯ್ಕೆ ಮಾಡಿ ಅಂಬೇಡ್ಕರ್ ಪ್ರಶಸ್ತಿ ನೀಡಲಾಗಿದೆ ಎಂದರು.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆ ಬಗ್ಗೆ ಪಕ್ಷ ತೀರ್ಮಾನಿಸುತ್ತೆ: ಸಿ.ಟಿ.ರವಿ

ಇನ್ನೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ತನಿಖಾ ವರದಿ ನಂತರ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ನೀಡಿರುವ ಹೇಳಿಕೆಗೆ ನಮ್ಮ ಸಹಮತವಿದೆ. ಪಕ್ಷದ ಮೇಲೆ ಆರೋಪ ಬಂದಾಗ ಆತಂಕ ಸಹಜ. ಅದನ್ನು ಮೀರಿ ನಾವು ಬೆಳೆಯುತ್ತೇವೆ. ಎಲ್ಲ ಆಯಾಮದಲ್ಲಿ ತನಿಖೆ ಆಗಲಿದೆಯೆಂದು ಸ್ಪಷ್ಟಪಡಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.