ETV Bharat / city

ರಾಜ್ಯಪಾಲರ ಆದೇಶಕ್ಕೆ ಸಿಎಂ ಟಿಪ್ಪಣಿ ಮೂಲಕ ತಡೆ ನೀಡಬಹುದೇ: ಹೈಕೋರ್ಟ್ ಪ್ರಶ್ನೆ

ಅಭಿವೃದ್ಧಿ ಕಾಮಗಾರಿಗಳಿಗೆ ತಡೆ ನೀಡಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

author img

By

Published : Feb 7, 2020, 11:04 PM IST

government-stops-development-works
ಹೈಕೋರ್ಟ್

ಬೆಂಗಳೂರು: ರಾಜ್ಯಪಾಲರ ಹೆಸರಿನಲ್ಲಿ ಆದೇಶ ಹೊರಡಿಸಿದ ಬಳಿಕ ಅದೇ ಆದೇಶವನ್ನು ಸಿಎಂ ಟಿಪ್ಪಣಿ ಬರೆದು ತಡೆ ಹಿಡಿಯಬಹುದೇ ಎಂಬುದಕ್ಕೆ ಕಾನೂನಾತ್ಮಕ ವಿವರಣೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಅಭಿವೃದ್ಧಿ ಕಾಮಗಾರಿಗಳಿಗೆ ತಡೆ ನೀಡಿರುವ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಹಿಂದಿನ ಸರ್ಕಾರ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಿದ್ದ ಆದೇಶವನ್ನು ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸೂಕ್ತ ಕಾರಣ ನೀಡದೆ ತಡೆ ಹಿಡಿಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿತು.

ಪೀಠಕ್ಕೆ ಉತ್ತರಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಮುಖ್ಯಮಂತ್ರಿಗಳು ಕಾಮಗಾರಿಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿಲ್ಲ. 4500 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಸಂಪುಟ ಅನುಮತಿ ನೀಡಿದೆ. ಹಿಂದಿನ ಸರ್ಕಾರದ ಆದೇಶವನ್ನು ಸ್ವಲ್ಪ ಬದಲಾವಣೆ ಮಾಡಲು ಮುಂದಾಗಿದೆ ಎಂದು ತಿಳಿಸಿದರು. ಹಾಗೆಯೇ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಎಜಿ ಹೇಳಿಕೆಗೆ ತೃಪ್ತವಾಗದ ಪೀಠ, ಸರ್ಕಾರದ ಆದೇಶವನ್ನು ನ್ಯಾಯಾಲಯ ಪ್ರಶ್ನಿಸುತ್ತಿಲ್ಲ. ಬದಲಿಗೆ ಸರ್ಕಾರ ಅನುಸರಿಸಿದ ಕ್ರಮ ಪ್ರಶ್ನಿಸಲಾಗಿದೆ. ಸಂವಿಧಾನದ ಅನುಚ್ಛೇದ 166ರ ಪ್ರಕಾರ ಸರ್ಕಾರವು ತನ್ನ ಆದೇಶಗಳನ್ನು ರಾಜ್ಯಪಾಲರ ಹೆಸರಿನಲ್ಲಿ ಹೊರಡಿಸುತ್ತದೆ. ಅಂತಹ ಆದೇಶವನ್ನು ಸಿಎಂ ಒಂದು ಟಿಪ್ಪಣಿ ಮೂಲಕ ತಡೆಹಿಡಿಯಲು ಕಾನೂನಿನಡಿಯಲ್ಲಿ ಅವಕಾಶವಿದೆಯೇ? ಎಂಬುದರ ಕುರಿತು ವಿವರಣೆ ನೀಡಿ ಎಂದು ಸರ್ಕಾರದ ಪರ ಹಾಜರಿದ್ದ ಎಜಿಗೆ ಸೂಚಿಸಿ, ವಿಚಾರಣೆಯನ್ನು ಮಾ. 16ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಹಿಂದಿನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಗಳು ನವ ಬೆಂಗಳೂರು ಯೋಜನೆಯಡಿ 2018ರಿಂದ ಮೂರು ವರ್ಷಗಳ ಅವಧಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 8,015 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಮೋದನೆ ನೀಡಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 2019ರ ಆ.3ರಂದು ನಗರಾಭಿವೃದ್ಧಿ ಇಲಾಖೆಗೆ ಟಿಪ್ಪಣಿ ಬರೆದು ನವ ಬೆಂಗಳೂರು ಯೋಜನೆಯಡಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಬಾರದು ಎಂದು ಸೂಚಿಸಿದ್ದರು.

ಆ ಟಿಪ್ಪಣಿ ಆಧರಿಸಿ ಯೋಜನೆಯಡಿ ಕಾಮಗಾರಿಗಳು ಹಾಗೂ ಟೆಂಡರ್‌ಗಳನ್ನು ಸ್ಥಗಿತಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ (ಬಿಬಿಎಂಪಿ) 2019ರ ಆ. 5 ರಂದು ಆದೇಶಿಸಿದ್ದರು. ಈ ಆದೇಶ ಪ್ರಶ್ನಿಸಿರುವ ಅರ್ಜಿದಾರರು, ಕಾಮಗಾರಿ ಮುಂದುವರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬುದು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.