ETV Bharat / city

ರಾಜ್ಯದ 25 ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್​​​​ ಗೋಶಾಲೆ ನಿರ್ಮಿಸಲು ಸರ್ಕಾರ ನಿರ್ಧಾರ - ರಾಜ್ಯದ ಪ್ರಮಖ 25 ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್ ಗೋಶಾಲೆ ನಿರ್ಮಾಣ

ಮೈಸೂರಿನ ಚಾಮುಂಡೇಶ್ವರಿ ದೇವಾಲಯ, ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ರಾಜ್ಯದ ಪ್ರಮಖ 25 ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್ ಗೋಶಾಲೆಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದೆ.

Kota Srinivas Poojary
ಕೋಟ ಶ್ರೀನಿವಾಸ್ ಪೂಜಾರಿ
author img

By

Published : Feb 27, 2020, 6:53 PM IST

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಾಲಯ, ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ರಾಜ್ಯದ ಪ್ರಮಖ 25 ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್ ಗೋಶಾಲೆಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದೆ.

ಕೋಟ ಶ್ರೀನಿವಾಸ್ ಪೂಜಾರಿ ಸುದ್ದಿಗೋಷ್ಠಿ

ರಾಜ್ಯದ ಎಲ್ಲಾ ದೇವಾಲಯಗಳ ಆಸ್ತಿ ಸಂರಕ್ಷಿಸಲು ಮತ್ತು ಅಲ್ಲಿನ ಆದಾಯ ಸೋರಿಕೆ ತಡೆಗಟ್ಟಲು ತೀರ್ಮಾನಿಸಿರುವ ಸರ್ಕಾರ, ಈ ಕುರಿತು ಪರಿಶೀಲನೆ ನಡೆಸಿ ಮುಂದಿನ ಮೂರು ತಿಂಗಳಲ್ಲಿ ವರದಿ ನೀಡುವಂತೆ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸೂಚನೆ ನೀಡಿದೆ.

ವಿಧಾನಸೌಧದಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಚಾಮುಂಡೇಶ್ವರಿ, ಶ್ರೀಕಂಠೇಶ್ವರ, ನಿಮಿಷಾಂಬ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ ರಾಜ್ಯದ ಇಪ್ಪತ್ತೈದು ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್ ಗೋಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಗೋಶಾಲೆ ನಿರ್ಮಿಸಲು ಅನುಕೂಲವಾಗುವಂತೆ ಎ ದರ್ಜೆಯ ವ್ಯಾಪ್ತಿಗೆ ಬರುವ ದೇವಾಲಯಗಳ ಸುತ್ತಮುತ್ತ ಹತ್ತರಿಂದ ಹದಿನೈದು ಎಕರೆ ಭೂಮಿಯನ್ನು ಗುರುತಿಸಿ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೀಗೆ ನಿರ್ಮಾಣವಾಗುವ ಗೋಶಾಲೆಗಳಲ್ಲಿ ನೂರರಿಂದ ಇನ್ನೂರು ಗೋವುಗಳನ್ನು ಸಾಕಲಾಗುವುದು. ಈ ಕಾರ್ಯಕ್ಕಾಗಿ ರಾಮಚಂದ್ರಾಪುರ ಮಠದ ಸ್ವಾಮೀಜಿಯವರ ಮಾರ್ಗದರ್ಶನ ಪಡೆಯಲಾಗುವುದು ಎಂದು ವಿವರಿಸಿದರು. ಗೋಸಂರಕ್ಷಣೆ ವಿಷಯದಲ್ಲಿ ರಾಮಚಂದ್ರಾಪುರ ಮಠ ಅತ್ಯುತ್ತಮವಾಗಿ ಕೆಲಸ ಮಾಡಿದೆ. ಹೀಗಾಗಿ ಮಠದ ಸ್ವಾಮೀಜಿಯವರಿಂದ ಮಾರ್ಗದರ್ಶನ ಪಡೆದು, ಈ ಇಪ್ಪತ್ತೈದು ಗೋಶಾಲೆಗಳನ್ನು ಮುನ್ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದೇ ರೀತಿ ಮುಜರಾಯಿ ದೇವಾಲಯಗಳ ವ್ಯಾಪ್ತಿಯಲ್ಲಿರುವ ಒಟ್ಟು ಆಸ್ತಿಯ ಪ್ರಮಾಣ ಎಷ್ಟು ಅನ್ನುವುದರ ವಿವರ ಪಡೆಯಬೇಕಿದೆ. ಯಾಕೆಂದರೆ ರಾಜ್ಯದ ಬಹುತೇಕ ಭಾಗಗಳಲ್ಲಿ ದೇವಾಲಯಗಳ ಆಸ್ತಿಯನ್ನು ಒತ್ತುವರಿ ಮಾಡಿದ ಕುರಿತು ದೂರುಗಳು ಕೇಳಿ ಬಂದಿವೆ. ಹೀಗಾಗಿ ಈ ಕುರಿತು ಸಮಗ್ರ ವಿವರ ಪಡೆದು ದೇವಾಲಯಗಳ ವ್ಯಾಪ್ತಿಯಲ್ಲಿನ ಆಸ್ತಿಯನ್ನು ಸಂರಕ್ಷಿಸಬೇಕಿದೆ. ರಾಜ್ಯದಲ್ಲಿ 33 ಸಾವಿರಕ್ಕಿಂತ ಹೆಚ್ಚು ಮುಜರಾಯಿ ದೇವಾಲಯಗಳಿದ್ದು, ಇದರ ವ್ಯಾಪ್ತಿಯ ಆಸ್ತಿಪಾಸ್ತಿಯ ಕುರಿತು ಸ್ಪಷ್ಟ ವಿವರ ಪಡೆಯಬೇಕಿದೆ. ಅದೇ ರೀತಿ ದೇವಾಲಯಗಳಲ್ಲಿ ಆದಾಯ ಸೋರಿಕೆಯಾಗುತ್ತಿರುವ ಕುರಿತು ಹಲವು ದೂರುಗಳು ಬಂದಿದ್ದು, ಕೆಲ ದೇವಾಲಯಗಳಲ್ಲಿ ಹುಂಡಿಗೆ ಸಿಸಿಟಿವಿ ಇದೆ. ಕೆಲವು ಕಡೆ ಇಲ್ಲ. ಹೀಗಾಗಿ ದೇವಾಲಯಗಳ ಆಸ್ತಿ ಸಂರಕ್ಷಣೆ ಮತ್ತು ದೇವಾಲಯಗಳ ಆದಾಯ ಸೋರಿಕೆ ತಡೆಗಟ್ಟುವ ಕುರಿತು ಕ್ರಮ ಕೈಗೊಳ್ಳಬೇಕಿದೆ. ಇದೇ ಕಾರಣಕ್ಕಾಗಿ ಮುಜರಾಯಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ ಅವರಿಂದ ವರದಿ ಕೇಳಿದ್ದು, ಮೂರು ತಿಂಗಳಲ್ಲಿ ಈ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ವಿವರ ನೀಡಿದರು.

ರಾಜ್ಯದ ನೂರು ಪ್ರಮುಖ ದೇವಾಲಯಗಳಲ್ಲಿ ಸಪ್ತಪದಿ ಕಾರ್ಯಕ್ರಮದಡಿ ನಡೆಸಲುದ್ದೇಶಿಸಿರುವ ಸಪ್ತಪದಿ ಯೋಜನೆಯನ್ನು ಎರಡು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದ ಅವರು, ಮೊದಲ ಹಂತದ ಸಾಮೂಹಿಕ ವಿವಾಹ ಕಾರ್ಯಕ್ರಮ ಏಪ್ರಿಲ್ 26ರಂದು ನಡೆಯಲಿದೆ. ಈ ಹಂತದಲ್ಲಿ ವಿವಾಹವಾಗಲಿಚ್ಛಿಸುವವರು ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿರುತ್ತದೆ ಎಂದು ಮಾಹಿತಿ ನೀಡಿದರು. ಮೊದಲ ಹಂತದಲ್ಲಿ ವಿವಾಹವಾಗಲು 1,218 ಮಂದಿ ಅರ್ಜಿಗಳನ್ನು ಪಡೆದಿದ್ದು, ಇದರಲ್ಲಿ ಇನ್ನೂರು ಮಂದಿ ಈಗಾಗಲೇ ದಾಖಲೆ ಸಹಿತ ಅರ್ಜಿ ಸಲ್ಲಿಸಿದ್ದಾರೆ. ಎರಡನೇ ಹಂತದ ಸಾಮೂಹಿಕ ವಿವಾಹ ಕಾರ್ಯಕ್ರಮ ಮೇ 24ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ವಿವಾಹವಾಗುವ ಪ್ರತಿ ಜೋಡಿ ಮೇಲೆ 55 ಸಾವಿರ ರೂಪಾಯಿ ಒದಗಿಸಲಾಗುವುದು ಎಂದು ಹೇಳಿದರು.

ಪ್ರಮುಖ ದೇವಾಲಯಗಳ ವ್ಯಾಪ್ತಿಯಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಕಡಿಮೆ ಬೆಲೆಗೆ ಬಾಡಿಗೆಗೆ ನೀಡಲಾಗಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜೀವನೋಪಾಯಕ್ಕಾಗಿ ತೆಂಗಿನಕಾಯಿ, ಹಣ್ಣು, ಹೂವು ಮಾರುವವರನ್ನು ಹೊರತುಪಡಿಸಿ ಉಳಿದವರಿಗೆ ಮಾರುಕಟ್ಟೆ ದರದಲ್ಲಿ ಅಂಗಡಿಗಳನ್ನು ಬಾಡಿಗೆಗೆ ನೀಡಲು ಟೆಂಡರ್ ಕರೆಯಲಾಗುವುದು ಎಂದರು. ದೇವಸ್ಥಾನಗಳಲ್ಲಿ ಮಾರ್ಷಲ್ ಆರ್ಟ್ ಕಲಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ದೇವಿ ದೇವಸ್ಥಾನಗಳಲ್ಲಿ ಮಾತೆಯರ ಆತ್ಮರಕ್ಷಣೆಗೆ ತರಬೇತಿ ಕೊಡಬೇಕು ಎನ್ನುವ ಮನವಿಗಳು ಬಂದಿವೆ. ನಿರ್ಭಯಾ ಪ್ರಕರಣದ ಬಳಿಕ ಮಾತೆಯರ ಆತ್ಮರಕ್ಷಣೆಗೆ ಮನವಿಗಳು ಬಂದಿವೆ. ಆದರೆ ಇಲಾಖೆ ಇನ್ನು ಯಾವುದೇ ನಿರ್ಧಾರ ಮಾಡಿಲ್ಲ. ಮನವಿಯನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದರು.

ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಬಗ್ಗೆ ಶಾಸಕರು ಮಾತನಾಡಿರುವ ವಿಷಯಕ್ಕೆ ಪ್ರತಿಕ್ರಿಯೆ ನೀಡಿ, ಅವರು ದೊರೆಸ್ವಾಮಿ ಅವರ ಬಗ್ಗೆ ಏನು ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಯಾರೇ ಆಗಲಿ ಹಗುರವಾಗಿ ಮಾತನಾಡಬಾರದು ಎಂದರು.

ಪೌರತ್ವದ ಪರವಾಗಿ ಮಾತನಾಡಿದ ಖಾಝಿತ್ವಾಖಾ ಅಹ್ಮದ್‌ ಹತ್ಯೆ ಯತ್ನ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇಂತಹ ಯತ್ನ ಸಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಇಂತಹದನ್ನು ಸಹಿಸಲ್ಲ. ಬಹುತೇಕ ಸಂದರ್ಭಗಳಲ್ಲಿ ರಾಷ್ಟ್ರೀಯತೆ ಬಗ್ಗೆ ಮಾತನಾಡಿದರೆ ಹತ್ಯೆಯ ಯತ್ನ ನಡೆಯುತ್ತಿದೆ. ನಮ್ಮ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.