ETV Bharat / city

ಈಶ್ವರಪ್ಪ ರಾಜೀನಾಮೆ ಅಂಗೀಕಾರ: ಸಂಪುಟದಿಂದ ಬಿಡುಗಡೆ ಮಾಡಿ ಆದೇಶ ಹೊರಡಿಸಿದ ರಾಜ್ಯಪಾಲ ಗೆಹ್ಲೋಟ್ - KS Eshwarappa resignation accepted

ಕೆ.ಎಸ್​​ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ರಾಜ್ಯಪಾಲ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

Governor Thaawarchand Gehlot
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
author img

By

Published : Apr 16, 2022, 10:00 AM IST

ಬೆಂಗಳೂರು: ಗುತ್ತಿಗೆದಾರ ಸಂತೋಷ್​ ಪಾಟೀಲ್​​ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ನಿನ್ನೆ(ಶುಕ್ರವಾರ) ಶಿವಮೊಗ್ಗದಿಂದ ಬೆಂಗಳೂರಿಗೆ ರ‍್ಯಾಲಿ ಮೂಲಕ ಆಗಮಿಸಿದ್ದ ಕೆ.ಎಸ್​​ ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

KS Eshwarappa resignation accepted
ಕೆ.ಎಸ್​​ ಈಶ್ವರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಈಶ್ವರಪ್ಪ ರಾಜೀನಾಮೆ ಪತ್ರ ಆಧರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಕಳುಹಿಸಿಕೊಟ್ಟಿದ್ದ ಸಿಎಂ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಸಿಎಂ ಬೊಮ್ಮಾಯಿ ಪತ್ರವನ್ನು ಪರಿಗಣಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ರಾಜ್ಯಪಾಲ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್‌.ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.