ETV Bharat / city

ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿ ದಿವ್ಯಾಂಗರು ಜೀವನ ಸುಧಾರಿಸಿಕೊಳ್ಳಬೇಕು : ರಾಜ್ಯಪಾಲರ ಕರೆ - ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕೇಂದ್ರ ಸರ್ಕಾರದ ವಿಕಲಚೇತನರ ಸಬಲೀಕರಣ ಇಲಾಖೆಯಲ್ಲಿ ವಿವಿಧ ಯೋಜನೆಗಳ ಮೂಲಕ ದೇಶಾದ್ಯಂತ 10,668ಕ್ಕೂ ಹೆಚ್ಚು ಶಿಬಿರಗಳನ್ನು ಆಯೋಜಿಸಿ, 20 ಲಕ್ಷ 35 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಪರಿಕರಗಳನ್ನು ಒದಗಿಸಲಾಗಿದೆ. ಅಲ್ಲದೇ, ಸರ್ಕಾರ ಹಿರಿಯ ನಾಗರಿಕರಿಗೆ ಕಾನೂನು ರೂಪಿಸುವ ಜತೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್( Governor Thawar chand Gehlot) ಮಾಹಿತಿ ನೀಡಿದರು..

Thawar Chand Gehlot inaugurates  free wheelchair distribution camp
ಉಚಿತ ಗಾಲಿ ಕುರ್ಚಿ ವಿತರಣೆಯ ಮೆಗಾ ಶಿಬಿರವನ್ನು ಉದ್ಘಾಟಿಸಿದ ರಾಜ್ಯಪಾಲರು
author img

By

Published : Nov 20, 2021, 5:32 PM IST

ಬೆಂಗಳೂರು : ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ದಿವ್ಯಾಂಗರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ದಿವ್ಯಾಂಗರು ಸರ್ಕಾರದ ಯೋಜನೆಗಳು ಹಾಗೂ ಸವಲತ್ತುಗಳು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಜೀವನವನ್ನು ಸುಧಾರಿಸಿಕೊಳ್ಳಲು ಮುಂದಾಗಬೇಕು.

ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಯೋಜನೆಗಳ ಬಗ್ಗೆ ದಿವ್ಯಾಂಗರಿಗೆ ಅರಿವು ಮೂಡಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್( Governor Thawar chand Gehlot) ಕರೆ ನೀಡಿದರು.

Thawar Chand Gehlot inaugurates  free wheelchair distribution camp
ಉಚಿತ ಗಾಲಿ ಕುರ್ಚಿ ವಿತರಣೆಯ ಮೆಗಾ ಶಿಬಿರ ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್‌ನ ಆಯುರ್ವೇದ ಆಸ್ಪತ್ರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್, ಭಗವಾನ್ ಮಹಾವೀರ್ ವಿಕಲಾಂಗ ಸಹಾಯತಾ ಸಮಿತಿ, ರೋಟರಿ ಕ್ಲಬ್ ಬೆಂಗಳೂರು, ಎಸ್‌ಬಿಐ ಮ್ಯೂಚುವಲ್ ಫಂಡ್ ಜಂಟಿಯಾಗಿ ಆಯೋಜಿಸಿದ್ದ ಉಚಿತ ಗಾಲಿ ಕುರ್ಚಿ ವಿತರಣೆಯ ಮೆಗಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಿವ್ಯಾಂಗರು ಇತರರಿಗಿಂತ ವಿಶೇಷ ಸಾರ್ಮರ್ಥ್ಯ ಹೊಂದಿರುತ್ತಾರೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪಾಲುದಾರರನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮರ್ಥ ನಾಯಕತ್ವದಲ್ಲಿ 'ಸಬ್ಕಾ ಸಾಥ್ ಸಬ್ಕಾ ವಿಕಾಸ್' ಮಂತ್ರವನ್ನು ಅರಿತುಕೊಂಡ ಕೇಂದ್ರ ಸರ್ಕಾರ ಸಮಾಜದಲ್ಲಿನ ದಿವ್ಯಾಂಗರು ಸೇರಿದಂತೆ ದೇಶದ ಪ್ರತಿಯೊಬ್ಬ ನಾಗರಿಕನ ಬೆಳವಣಿಗಾಗಿ ಅಭೂತಪೂರ್ವ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

ಉಚಿತ ಗಾಲಿ ಕುರ್ಚಿ ವಿತರಣೆಯ ಮೆಗಾ ಶಿಬಿರ

ಕೇಂದ್ರ ಸರ್ಕಾರದ ವಿಕಲಚೇತನರ ಸಬಲೀಕರಣ ಇಲಾಖೆಯಲ್ಲಿ ವಿವಿಧ ಯೋಜನೆಗಳ ಮೂಲಕ ದೇಶಾದ್ಯಂತ 10,668ಕ್ಕೂ ಹೆಚ್ಚು ಶಿಬಿರಗಳನ್ನು ಆಯೋಜಿಸಿ, 20 ಲಕ್ಷ 35 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಪರಿಕರಗಳನ್ನು ಒದಗಿಸಲಾಗಿದೆ. ಅಲ್ಲದೇ, ಸರ್ಕಾರ ಹಿರಿಯ ನಾಗರಿಕರಿಗೆ ಕಾನೂನು ರೂಪಿಸುವ ಜತೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮಾಹಿತಿ ನೀಡಿದರು.

ದಿವ್ಯಾಂಗರ ಸಬಲೀಕರಣಕ್ಕಾಗಿ ಸರ್ಕಾರದ ಜತೆಗೆ ಹಲವು ಸ್ವಯಂಸೇವಾ ಸಂಸ್ಥೆಗಳೂ ಶ್ರಮಿಸುತ್ತಿವೆ. ಭಗವಾನ್ ಮಹಾವೀರ್ ವಿಕಲಾಂಗ ಸಹಾಯತಾ ಸಮಿತಿಯು ದಿವ್ಯಾಂಗರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವದ ಅತಿದೊಡ್ಡ ಸರ್ಕಾರೇತರ ಸಂಸ್ಥೆಯಾಗಿದೆ. ಸಂಸ್ಥೆಯು 1975 ರಲ್ಲಿ ರಾಜಸ್ಥಾನದ ಜೈಪುರದಲ್ಲಿ ಸ್ಥಾಪನೆಯಾಯಿತು. ಅಂದಿನಿಂದ ಈವರೆಗೂ ಅನೇಕ ಸಾಧನೆಗಳನ್ನು ಮಾಡಿದೆ.

ಕಳೆದ 46 ವರ್ಷಗಳಲ್ಲಿ ಸುಮಾರು 20 ಲಕ್ಷ ದಿವ್ಯಾಂಗರಿಗೆ ಸಂಸ್ಥೆಯಿಂದ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಆರ್ಥಿಕವಾಗಿ ಬಡತನ ಹೊಂದಿರುವ ಕುಟುಂಬದವರು ಈ ಪ್ರಯೋಜನ ಪಡೆದುಕೊಂಡಿದ್ದಾರೆ. ಇಂಡಿಯಾ ಫಾರ್ ಹ್ಯೂಮಾನಿಟಿ ಪ್ರಾಜೆಕ್ಟ್ ಅಡಿಯಲ್ಲಿ ಅನೇಕ ಶಿಬಿರಗಳನ್ನು ಆಯೋಜಿಸುವ ಮೂಲಕ ಇಡೀ ವಿಶ್ವದಲ್ಲೇ ದೇಶದ ಗೌರವ ಹೆಚ್ಚಿಸಿರುವುದು ಹೆಮ್ಮೆಯ ಸಂಗತಿ ಎಂದ ಅವರು, ಸಂಸ್ಥೆಯ ಕಾರ್ಯಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.

ಇದೇ ರೀತಿ ದಿವ್ಯಾಂಗರನ್ನು ಗುರುತಿಸಿ, ಸರ್ಕಾರದ ಸೌಲಭ್ಯಗಳನ್ನು ಒದಗಿಸಿದರೆ, ಅವರ ಮುಖದಲ್ಲಿ ಸಂತೋಷ ಮೂಡುವುದರ ಜತೆಗೆ ಸ್ವಾಭಿಮಾನದ ಬದುಕು ಜೀವಿಸಲು ಸಹಕಾರಿಯಾಗುತ್ತದೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ, ಭಗವಾನ್ ಮಹಾವೀರ್ ವಿಕಲಾಂಗ ಸಹಾಯತಾ ಸಮಿತಿಯ ಸಂಸ್ಥಾಪಕ ಡಿ.ಆರ್ ಮೆಹ್ತಾ, ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಫಾಜಲ್ ಮೊಹಮ್ಮದ್, ರೋಟರಿ ಕ್ಲಬ್ ಬೆಂಗಳೂರು ಜಿಲ್ಲಾ ಅಧ್ಯಕ್ಷ ನರ್ಮದಾ ನಾರಾಯಣ, ಆರ್ಟ್ ಆಫ್ ಲಿವಿಂಗ್ ಟ್ರಸ್ಟ್ ನ ಚೇರ್ ಮನ್ ಹರ್ಷ, ಎಸ್ ಬಿಐ ನ ಗುರುಪ್ರೀತ್ ಸಿಂಗ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.