ETV Bharat / city

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ತಂತ್ರಜ್ಞಾನ ಮುಖ್ಯ: ಗವರ್ನರ್‌ ಗೆಹ್ಲೋಟ್ - ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮಕ್ಕಳು ಮತ್ತು ಯುವಕರ ಭವಿಷ್ಯಕ್ಕೆ ಸರಿಯಾದ ಮಾರ್ಗ ತೋರಿಸಲು ಮತ್ತು ದೇಶದಲ್ಲಿ ಅಂತರ್ಗತ ಅಭಿವೃದ್ಧಿಯನ್ನು ಉತ್ತೇಜಿಸಲು ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಉತ್ತೇಜಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

Thawar Chand Gehlot
Thawar Chand Gehlot
author img

By

Published : Apr 4, 2022, 8:47 AM IST

ಬೆಂಗಳೂರು: ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಇಂದಿನ ಕಾಲದಲ್ಲಿ ತಂತ್ರಜ್ಞಾನ ಬಹಳ ಮುಖ್ಯ. ತರಗತಿಗಳಲ್ಲಿ ಡಿಜಿಟಲ್ ಕಲಿಕಾ ಸಾಧನಗಳನ್ನು ಪರಿಣಾಮಕಾರಿಯಾಗಿ ಬಳಸುವುದರಿಂದ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಮತ್ತು ಭಾಗವಹಿಸುವಿಕೆಯನ್ನು ಹೆಚ್ಚಿಸಬಹುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಸಿಂಧಿ ಪದವಿ ಪೂರ್ವ ಕಾಲೇಜು​ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಮತ್ತು ಯುವಕರ ಭವಿಷ್ಯಕ್ಕೆ ಸರಿಯಾದ ಮಾರ್ಗವನ್ನು ತೋರಿಸಲು ಮತ್ತು ದೇಶದಲ್ಲಿ ಅಂತರ್ಗತ ಅಭಿವೃದ್ಧಿಯನ್ನು ಉತ್ತೇಜಿಸಲು ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಉತ್ತೇಜಿಸಬೇಕು. ಶಿಕ್ಷಕರ ತರಬೇತಿಗೆ ವ್ಯವಸ್ಥೆ ಮಾಡಬೇಕು, ಅಂತರ್ಗತ ಶಿಕ್ಷಣ ವ್ಯವಸ್ಥೆಗೆ ಒತ್ತು ನೀಡಬೇಕು, ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸಬೇಕು. ಪರಿಸರ ಸಂರಕ್ಷಣೆ ಮತ್ತು ನೀರಿನ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು.

Thawar Chand Gehlot
ಸಿಂಧಿ ಪದವಿ ಪೂರ್ವ ಕಾಲೇಜ್​ ಉದ್ಘಾಟನಾ ಸಮಾರಂಭ

ರಾಷ್ಟ್ರೀಯ ಶಿಕ್ಷಣ ನೀತಿ 2020-21ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದೆ. ದೇಶದ ಅಭಿವೃದ್ಧಿಗೆ ಅಗತ್ಯವಾದ ಅವಶ್ಯಕತೆಗಳನ್ನು ಪೂರೈಸುವುದು ಇದರ ಗುರಿ. ನರೇಂದ್ರ ಮೋದಿ ಮಾರ್ಗದರ್ಶನದಡಿ ಪ್ರತಿಯೊಂದು ಹಂತದಲ್ಲೂ ಶಿಕ್ಷಣ ತಜ್ಞರು, ತಜ್ಞರು ಮತ್ತು ಶಿಕ್ಷಕರ ಸಲಹೆ ಪಡೆದು ಎನ್ ಇ ಪಿ ಜಾರಿಗೊಳಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕವಾಗಿರುವುದು ಸಂತಸದ ವಿಷಯ ಎಂದು ಹೇಳಿದರು.

ಇದನ್ನೂ ಓದಿ:ಶ್ರೀಲಂಕಾ ಸಚಿವರ ಸಾಮೂಹಿಕ ರಾಜೀನಾಮೆ: ಪ್ರಧಾನಿಯಾಗಿ ಮಹಿಂದಾ ರಾಜಪಕ್ಸ ಮುಂದುವರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.