ಬೆಂಗಳೂರು: ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಅಮರನಾಥ ಯಾತ್ರಿಕರಿಗೆ ಸಂಕಷ್ಟ ಹಿನ್ನೆಲೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಮರನಾಥ ಯಾತ್ರಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಎಲ್ಲ ಕ್ರಮ ಕೈಗೊಳುತ್ತಿದೆ. ಹಾಗೆಯೇ ರಾಜ್ಯ ಸರ್ಕಾರ ಕೂಡ ಹೆಲ್ಪ್‌ಲೈನ್ ತೆರೆದಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ರಾಮನಗರ ಇತ್ಯಾದಿ ಕಡೆಗಳಿಂದ ಕರೆಗಳು ಬರುತ್ತಿವೆ. ಈವರೆಗೆ ಸುಮಾರು 15 ಕರೆಗಳು ಬಂದಿವೆ ಎಂದು ತಿಳಿಸಿದರು.
ಬರುತ್ತಿರುವ ಕರೆಗಳ ಮಾಹಿತಿ ಆಧರಿಸಿ ಮಾನಿಟರ್ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರದ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ರಾಜ್ಯ ಸರ್ಕಾರ ಕನ್ನಡಿಗ ಯಾತ್ರಿಕರ ರಕ್ಷಣೆಗೆ ನಿರಂತರ ಪ್ರಯತ್ನದಲ್ಲಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ ಆರಂಭ